ಉಡುಪಿ: ಕರಾವಳಿಯಲ್ಲಿ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರ ಸಮುದಾಯದ ಬಾರ್ಕೂರು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.
ಈ ಪ್ರಯುಕ್ತ ನಡೆದ ತೆಪ್ಪೋತ್ಸವ (ಹೊಳೆಯಾನ ) ವಿಶೇಷವಾಗಿತ್ತು. ಶ್ರೀ ಕುಲಮಹಾಸ್ತ್ರಿ ಅಮ್ಮನವರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರ ಹಾಗೂ ವಿದ್ಯುದ್ವಿಪಾಲಂಕರದಿಂದ ಅಲಂಕರಿಸಿದ ಸಂಗಡ ಕಟ್ಟಿದ ಜೋಡಿ ದೋಣಿಯಲ್ಲಿ ಕೊಂಡೊಯ್ಯಲಾಯಿತು.
ರಜತ ಪಲ್ಲಕ್ಕಿಯಲ್ಲಿ ಇರಿಸಿ ಭಜನೆ, ವಾದ್ಯ ಘೋಷ, ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ರಾತ್ರಿ 11 ಗಂಟೆಗೆಯಿಂದ ಪ್ರಾರಂಭಗೊಂಡು ಸರಿ ಸುಮಾರು 2 ಗಂಟೆಯ ಅವಧಿಯಲ್ಲಿ ಹರಿಯುವ ನೀರಲ್ಲಿ ದೇವರ ಮೆರವಣಿಗೆ ನಡೆಯಿತು . ನಡುಗಡ್ಡೆಯಾದ ಬೆಣ್ಣೆಕುದ್ರು ಗೆ ಒಂದು ಪ್ರದಕ್ಷಿಣೆ ತರಲಾಯ್ತು. ಈ ತೆಪ್ಪೋತ್ಸವ ನೋಡಲು ಸಾವಿರಾರು ಮಂದಿ ಸೇರಿದ್ದು ಕಣ್ಣಿಗೆ ಹಬ್ಬವಾಗಿತ್ತು.
ಈ ಬಾರಿ ಡ್ರೋನ್ ಮೂಲಕ ಶ್ರೀ ಕುಲ ಮಹಾಸ್ತ್ರೀ ಅಮ್ಮ ನವರ ಉತ್ಸವ ಮೂರ್ತಿ ಗೆ ಪುಷ್ಪಾರ್ಚನೆ ಗೈಯಲಾಯಿತು. ಹಲವಾರು ದೋಣಿಗಳು ತೆಪ್ಪೋತ್ಸವದಲ್ಲಿ ಸಾಗಿ ಬಂದದ್ದು ವಿಶೇಷ ಆಕರ್ಷಣೆಯಾಗಿತ್ತು. ಸಹಸ್ರಾರು ಮಂದಿ ಈ ತೆಪ್ಪೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…