ಬೆಳಗಾವಿ: ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ ಬಳಿ ನಡೆದ ಅಂಗನವಾಡಿ ನೌಕರರ ಬೆಳಗಾವಿ ಚಲೋ ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದರು.
ಅಂಗನವಾಡಿ ಕಾರ್ಯಕರ್ತರಿಗೆ ವಿಮಾ ಯೋಜನೆ ಜಾರಿ, ವೇತನ ಪರಿಷ್ಕರಣೆ, ಮೊಟ್ಟೆ ದರ ಪರಿಷ್ಕರಣೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಗೃಹಲಕ್ಷ್ಮೀ ಯೋಜನೆಯನ್ನು ನಮ್ಮ ಇಲಾಖೆಯಿಂದ ಜಾರಿಗೆ ತರುವ ಮೂಲಕ ಬಲಿಷ್ಠರಾಗಿದ್ದೇವೆ. ವೇತನ ಹೆಚ್ಚಳ ಏರಿಕೆ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡುವೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಾದ ಡಾ.ಶಾಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಎನ್.ಸಿದ್ದೇಶ್ವರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…