ಉಡುಪಿ: ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು 2018 ರಿಂದಲೇ ಕಾಮಗಾರಿಗಳನ್ನು ಕೈಗೊಳ್ಳಲು ಪತ್ರ ವ್ಯವಹಾರಗಳು ನಡೆದಿದ್ದವು, ಕಳೆದ ಮೂರು ವರ್ಷದಿಂದ ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡಿದ್ದರೂ ಸಹ ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಹೆಚ್ಚಿನ ವ್ಯತ್ಯಯ ಉಂಟಾಗಿ ಪ್ರತೀ ದಿನವೂ ಜಿಲ್ಲಾಡಳಿತಕ್ಕೆ ದೂರುಗಳು ಕೇಳಿ ಬರುತ್ತಿವೆ. ಹಾಗೂ ಅಪಘಾತಗಳು ಸಹ ಕಾಮಗಾರಿಯ ವಿಳಂಬದಿAದಾಗಿ ಉಂಟಾಗಿವೆ. ಇವಕ್ಕೆಲ್ಲಾ ಅಭಿಯಂತರರುಗಳು, ಗುತ್ತಿಗೆದಾರರೇ ಕಾರಣ ಎಂದು ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಪ್ರತೀ ವಾರಕ್ಕೊಮ್ಮೆ ಕಾಮಗಾರಿ ಪ್ರಕ್ರಿಯೆಯ ಮಾಹಿತಿಯನ್ನು ನೀಡುವಂತೆ ಸೂಚನೆ ನೀಡಿದರು.
ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು ಈಗಾಗಲೇ ರೈಲ್ವೆ ಇಲಾಖೆಯ ವತಿಯಿಂದ ಅನುಮತಿಯನ್ನು ನೀಡಲಾಗಿದ್ದು, ಸಿವಿಲ್ ಕಾಮಗಾರಿ ಹಾಗೂ ಕಬ್ಬಿಣದ ಬ್ರಿಡ್ಜ್ನ ಜೋಡಣೆ ಕಾಮಗಾರಿಗಳನ್ನು ಹಗಲು ಹಾಗೂ ರಾತ್ರಿ ಎರಡು ಪಾಳಯದಲ್ಲಿ ಕಾರ್ಮಿಕರನ್ನು ನಿಯೋಜಿಸಿ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಕಾಮಗಾರಿಯನ್ನು ಕೈಗೊಳ್ಳುವಾಗ ಸುರಕ್ಷತೆಗೆ ಆದ್ಯತೆಯನ್ನು ನೀಡಬೇಕು. ರೈಲು ಸಾಗಾಣಿಕೆಗೆ ಯಾವುದೇ ತೊಂದರೆ ಆಗದಂತೆ ನಿಗಾ ವಹಿಸಬೇಕು ಎಂದ ಅವರು ಜನವರಿ 7 ರ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಗಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲ ಕೃಷ್ಣ, ಶೃಂಗೇರಿ-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…