ಕರಾವಳಿ

ಇಸಿಜಿ ಯಂತ್ರಗಳ ಬಳಕೆ ಕಲಿತು ಸದ್ಭಳಕೆಗೆ ಮುಂದಾಗಬೇಕು; ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್

ಮಂಗಳೂರು: ಆರೋಗ್ಯ ಕೇಂದ್ರಗಳಲ್ಲಿ ಇರುವ ಆರೋಗ್ಯ ಇಲಾಖೆ ಸಿಬ್ಬಂದಿಗಳೇ ಇಸಿಜಿ ಯಂತ್ರದ ಬಳಕೆಯನ್ನು ಕಲಿತುಕೊಂಡು ಅದರ ಸದ್ಭಳಕೆಗೆ ಮುಂದಾಗಬೇಕು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಹೇಳಿದರು.

 


ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ಕಾರ್ಡಿಯೋಲಜಿ ಎಟ್ ಡೋರ್‌ಸ್ಟೆಪ್ ಫೌಂಡೇಶನ್, ದ.ಕ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಎಂಆರ್‌ಪಿಎಲ್ ಪ್ರಾಯೋಜನೆಯಲ್ಲಿ ೬೪ ಇಸಿಜಿ ಯಂತ್ರಗಳ ಹಸ್ತಾಂತರ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಸಿಜಿ ಯಂತ್ರಗಳನ್ನು ಎಂಆರ್‌ಪಿಎಲ್ ಒದಗಿಸಿಕೊಟ್ಟಿದೆ, ಇದರ ಸದ್ಭಳಕೆಯಾಗಬೇಕು, ಹೃದಯ ಸಂಬಂಧಿ ತೊಂದರೆಗಳಿಗೆ ಆಗಮಿಸುವವರ ಇಸಿಜಿ ಪರೀಕ್ಷೆ ಸಕಾಲದಲ್ಲಿ ಆಗುವುದರಿಂದ ಅವರ ಜೀವರಕ್ಷಣೆ ಸಾಧ್ಯವಾಗಲಿದೆ. ಅಲ್ಲದೆ ಜನರೂ ಕೂಡ ಇತರ ಆರೋಗ್ಯ ಸಮಸ್ಯೆಗೆ ನೀಡುವಷ್ಟೇ ಮಹತ್ವವನ್ನು ಹೃದಯಸಂಬಂಧಿ ವಿಚಾರಗಳಿಗೂ ನೀಡಬೇಕು ಎಂದರು.
ಕೆಎಂಸಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಮಾತನಾಡಿ, ಇಸಿಜಿ ಯಂತ್ರಗಳು ಇದ್ದರೂ ಸರಿಯಾಗಿ ಬಳಕೆಯಾಗುವುದಿಲ್ಲ. ಅವುಗಳನ್ನು ತೆಗೆದುಕೊಂಡು ಹೋಗಿ ಹಾಗೆಯೇ ಇರಿಸಿದರೆ ಪ್ರಯೋಜನವಿಲ್ಲ. ಇಸಿಜಿ ಯಂತ್ರ ಬಳಸುವುದಕ್ಕೆ ವೈದ್ಯರೇ ಬೇಕಾಗಿಲ್ಲ, ಬದಲಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಅದರ ಬಳಕೆ ಕಲಿತು ಜನರಿಗೆ ನೆರವಾಗಬೇಕು ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಮಾತನಾಡಿ, ಇಸಿಜಿ ಯಂತ್ರಗಳನ್ನು ನಮ್ಮ ಕ್ಲಿನಿಕ್, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಒದಗಿಸಲಾಗುತ್ತಿದೆ. ಇನ್ನಷ್ಟು ಮಂದಿ ಪ್ರಾಯೋಜಕತ್ವ ವಹಿಸಿದರೆ ಇತರ ಬಾಕಿ ಇರುವ ಆರೋಗ್ಯ ಕೇಂದ್ರಗಳಿಗೂ ಇಸಿಜಿ ಮಷಿನ್ ನೀಡಬಹುದು. ಇದರಿಂದ ಜನರಿಗೆ ಸಾಕಷ್ಟು ನೆರವಾಗಲಿದೆ ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್‌ಚಂದ್ರ ಕುಲಾಲ್ ಮಾತನಾಡಿ, ಜಿಲ್ಲೆಯ ವಿವಿಧ ಕಡೆಗಳಲ್ಲಿರುವ ಜನರು ನಗರದಲ್ಲಿ ಇರುವವಷ್ಟು ಭಾಗ್ಯಶಾಲಿಗಳಲ್ಲ. ಯಾವುದೇ ಹೃದ್ರೋಗ ಲಕ್ಷಣ ಕಂಡುಬಂದಾಗ ನಗರಕ್ಕೆ ಬರಲು ಸಮಯ ತಗಲುತ್ತದೆ. ಹಾಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ಇಸಿಜಿ ಯಂತ್ರಗಳು ಬಂದಾಗ ಅದರ ಮೂಲಕ ತಪಾಸಣೆ ಮಾಡಿ ಗೋಲ್ಡನ್ ಅವರ್‌ನಲ್ಲಿ ಚಿಕಿತ್ಸೆ ನೀಡುವುದು ಸಾಧ್ಯವಾಗುತ್ತದೆ ಎಂದರು.
ಎಂಆರ್‌ಪಿಎಲ್ ಮಾನವ ಸಂಪನ್ಮೂಲ ವಿಭಾಗದ ಜಿಜಿಎಂ ಕೃಷ್ಣ ಹೆಗ್ಡೆ ಮಾತನಾಡಿ, ಎಂಆರ್‌ಪಿಎಲ್ ಸಂಸ್ಥೆ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಮಟ್ಟದಲ್ಲಿ ಸಿಎಸ್‌ಆರ್ ನಿದಿಯಡಿ ನೆರವು ನೀಡುತ್ತಾ ಬಂದಿದೆ. ಈಗ ನೀಡಲಾಗಿರುವ ಇಸಿಜಿ ಯಂತ್ರಗಳು ಗರಿಷ್ಠ ಮಟ್ಟದಲ್ಲಿ ಬಳಕೆಯಾಗಲಿ ಎಂದು ಹಾರೈಸಿದರು.
ಮಂಗಳೂರು ನಗರದ ಹಾಗೂ ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್‌ಗಳಿಗೆ ಒಟ್ಟು ೬೪ ಇಸಿಜಿ ಯಂತ್ರಗಳನ್ನು ಇದೇ ವೇಳೆ ವಿತರಿಸಲಾಯಿತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

15 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

16 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

16 hours ago

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…

19 hours ago

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…

20 hours ago

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…

20 hours ago