ಮುಲ್ಕಿ: 400 ವರ್ಷಗಳ ಇತಿಹಾಸವಿರುವ ಮುಲ್ಕಿ ಸೀಮೆಯ ಅರಸು ಕಂಬಳ ಡಿಸೆಂಬರ್ 22ರಂದು ನಡೆಯಲಿದೆ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.

ಮುಲ್ಕಿ ಅರಮನೆಯ ಧರ್ಮ ಚಾವಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮುಲ್ಕಿ ಅರಮನೆಯ ಗೌತಮ್ ಜೈನ್ ಮಾತನಾಡಿ, ಮುಲ್ಕಿ ಸೀಮೆಯ ಅರಸು ಕಂಬಳ ಬೆಳಿಗ್ಗೆ 9 ಗಂಟೆಗೆ ಪೂಜಾ ವಿಧಿ ವಿಧಾನಗಳೊಂದಿಗೆ ವಿಧ್ಯುಕ್ತವಾಗಿ ಪ್ರಾರಂಭವಾಗಲಿದ್ದು, ಕಂಬಳದ ಉದ್ಘಾಟನೆಯನ್ನು ವಿಶ್ರಾಂತ ನ್ಯಾಯಾಧೀಶ ಹಾಗೂ ಕರ್ನಾಟಕದ ಮಾಜೀ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆಯವರು ನೆರವೇರಿಸಲಿದ್ದಾರೆ.
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊತ್ತೇಸರ ಎನ್. ಎಸ್. ಮನೋಹರ ಶೆಟ್ಟಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತುವಿದ್ವಾನ್ ಪಂಜ ಭಾಸ್ಕರ ಭಟ್ ರವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ ಎಂದರು
ಸಂಜೆ 5ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ವಿಧಾನಸಭೆಯ ಅಧ್ಯಕ್ಷ ಯು. ಟಿ ಖಾದರ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿದ,ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಬೆಂಗಳೂರು ಕರ್ನಾಟಕ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರಕುಮಾರ್, ಮತ್ತು ಮುಂಬೈ ಹೇರಂಭ ಇಂಡಸ್ಟ್ರೀಸ್ ಸಿ.ಎಮ್.ಡಿ,ಕನ್ಯಾನ ಸದಾಶಿವ ಶೆಟ್ಟಿ, ರವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಸಂಸದ ಕ್ಯಾ. ಬೃಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್ ಮಾಜೀ ಸಚಿವ ಕೆ. ಅಭಯಚಂದ್ರ ಜೈನ್ ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಡುಪಿ ಟು ಮುಂಬೈ ಹೋಟೆಲ್ ನ ಸಿಎಂಡಿ ಶಿವಚಂದ್ರ ಶೆಟ್ಟಿ ದೆಪ್ಪುಣಿಗುತ್ತು ಸಹಿತ ಮಾಜೀ ಸಚಿವರು ಮತ್ತು ಇತರ ಗಣ್ಯರು ವೇದಿಕೆಯಲ್ಲಿರಲಿದ್ದಾರೆ. ಕಾರ್ಯಕಮದಲ್ಲಿ ತಾರಾ ಆಕರ್ಷಣೆಯಾಗಿ ಖ್ಯಾತ ಚಲನಚಿತ್ರ ನಟ ಪ್ರಮೋದ್ ಶೆಟ್ಟಿ, ಪರಿಸರ ಕಾರ್ಯಕರ್ತ ಸ್ನೇಕ್ ಶ್ಯಾಮ್ ಮೈಸೂರು, ಬಿಗ್ ಬಾಸ್ ಖ್ಯಾತಿಯ ಕಿರಿಕ್ ಕೀರ್ತಿ ಮತ್ತು ಪ್ರಥಮ್ ಭಾಗವಹಿಸಲಿದ್ದಾರೆ.
ಡಿಸೆಂಬರ್ 23 ರಂದು ಬೆಳಿಗ್ಗೆ 10 ಗಂಟೆಗೆ ಕಂಬಳದ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಸಮರೋಪ ಸಮಾರಂಭದ ಅಧ್ಯಕ್ಷತೆಯನ್ನು ಉದ್ಯಮಿ ಎಚ್. ಭಾಸ್ಕರ ಸಾಲ್ಯಾನ್ ಹಳೆಯಂಗಡಿ, ವಹಿಸಲಿದ್ದು ಸೀಮೆಯ ಎಲ್ಲಾ ಗ್ರಾಮ ಪಂಚಾಯತಿಯ ಎಲ್ಲಾ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ ಎಂದರು
ಕಂಬಳದಲ್ಲಿ ಸುಮಾರು 175 ರಿಂದ 200 ಜೋಡಿ ಕೋಣಗಳು ಭಾಗವಹಿಸುವ ಭಾಗವಹಿಸುವ ನಿರೀಕ್ಷೆ ಇದ್ದು ಸೀಮೆಯ ಅರಸು ಕಂಬಳವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು
ಪತ್ರಿಕಾಗೋಷ್ಠಿಯಲ್ಲಿ ಬಂಕಿ ನಾಯಕರು,ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್
ಮುಲ್ಕಿ ಸೀಮೆಯ ಅರಸು ಕಂಬಳದ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಮತ್ತಿತರರು ಉಪಸ್ಥಿತರಿದ್ದರು
ಸೀಮೆಯ ಅರಸು ಕಂಬಳ ಸಮಿತಿಯ ಉಪಾಧ್ಯಕ್ಷ ವಿನೋದ್ ಸಾಲ್ಯಾನ್ ಧನ್ಯವಾದ ಅರ್ಪಿಸಿದರು



