ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್: ಲಂಚಕ್ಕೆ ಬೇಡಿಕೆ-ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಸುರತ್ಕಲ್:ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ದಿನೇಶ್ ರವರನ್ನು ಲೋಕಾಯುಕ್ತ ಪೊಲೀಸರು ಹಣ ಸಮೇತ ರೆಡ್ ಹ್ಯಾಂಡಾಗಿ ಹಿಡಿದು ಪ್ರಕರಣ ದಾಖಲಿಸಿದ್ದಾರೆ.

ದೂರುದಾರ ರವರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ದೂರುದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ ಕಳುಹಿಸಿದ್ದರು
ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ರವರು ಒಂದು ವರ್ಷಕ್ಕಿಂತ ಹೆಚ್ಚು ಕಾಲ ಯಾವುದೇ ಕ್ರಮ ಕೈಗೊಳ್ಳದೇ ಕಡತವನ್ನು ಬಾಕಿ ಇರಿಸಿಕೊಂಡಿದ್ದರು
ಈ ಬಗ್ಗೆ ದೂರುದಾರರು ಡಿ 9 ರಂದು ರಂದು ಅರ್ಜಿಯ ಬಗ್ಗೆ ಕಂದಾಯ ನಿರೀಕ್ಷಕರ ಕಛೇರಿಗೆ ಹೋಗಿ ವಿಚಾರಿಸಲಾಗಿ ಮುಲ್ಕಿ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ರವರು ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು ರೂ 4 ಲಕ್ಷ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ
ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ದೂರುದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು
ಡಿಸೆಂಬರ್ 19 ಬೆಳಿಗ್ಗೆ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ರವರು ದೂರುದಾರರಿಂದ ರೂ. 4 ಲಕ್ಷ ಲಂಚದ ಹಣವನ್ನು ಸ್ವೀಕರಿಸುವಾಗ ಸುರತ್ಕಲ್ ಜಂಕ್ಷನ್ ಬಳಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ
ಕೂಡಲೇ ಲೋಕಾಯುಕ್ತರು ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ
ಕಾರ್ಯಾಚರಣೆಯಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ,ನಟರಾಜ್ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ॥ ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್ ಇವರು ಸಿಬ್ಬಂದಿಗಳ ಜೊತೆ ಟ್ರಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!