ಉಡುಪಿ: ಉಡುಪಿಯ ಐಟಿ ಕಂಪನಿ ರೋಬೋಸೋಫ್ಟ್ ಟೆಕ್ನಾಲಜೀಸ್ ಇದರ ಸಿಎಸ್‌ಆರ್ ಕಾರ್ಯಕ್ರಮದ ಅಡಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ಗೆ ತ್ಯಾಜ್ಯ ಸಂಗ್ರಹಕ್ಕಾಗಿ ಬಳಸಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಇಂದು ಟೆಕ್ನಾಲಜೀಸ್ ಕಂಪನಿಯ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.
ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರಿಗೆ ಈ ಎಲೆಕ್ನಿಕ್ ಆಟೋ ರಿಕ್ಷಾಗಳನ್ನು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿತೇಜ ಬೊಮ್ಮಿರೆಡ್ಡಿಪಲ್ಲಿ ವಿದ್ಯುಕ್ತವಾಗಿ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ರೋಬೋ ಸೋಫ್ಟ್ ಸಂಸ್ಥೆ ಕೈಗೊಂಡಿರುವ ಹಲವಾರು ಸಾಮಾಜಿಕ ಕಾರ್ಯಕ್ರಮಗಳು ಶ್ಲಾಘನೀಯ. ಎಲೆಕ್ನಿಕ್ ಆಟೋ ರಿಕ್ಷಾ ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸಂರಕ್ಷಣೆಗೆ ತುಂಬಾ ಸಹಕಾರಿಯಾಗಲಿದೆ ಎಂದು ಹೇಳಿದರು.
ಪ್ರತೀಕ್ ಬಾಯಲ್ ಮಾತನಾಡಿ, ಉಡುಪಿ ಜಿಲ್ಲೆಯು ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಮತ್ತು ತ್ಯಾಜ್ಯ ನಿರ್ವಹಣೆಯನ್ನು ಆರ್ಥಿಕ ಚಟುವಟಿಕೆ ಯಾಗಿಸುವ ಮೂಲಕ ಯಶಸ್ಸು ಸಾಧಿಸಿದೆ. ರೋಬೋಸೋಫ್ಟ್ ಸಂಸ್ಥೆಯ ಸ್ವಚ್ಛತೆಯೇ ಸೇವೆ ಎಂಬ ಸಂಕಲ್ಪ ಮತ್ತು ಈ ನಿಟ್ಟಿನಲ್ಲಿ ಕಂಪನಿಯ ಪ್ರಯತ್ನ ಎಲ್ಲರಿಗೂ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರವಿತೇಜ ಬೊಮ್ಮಿರೆಡ್ಡಿಪಲ್ಲಿ ಮಾತನಾಡಿ, ರೋಬೋಸೋಫ್ಟ್ ಕಂಪನಿ ತಂತ್ರಜ್ಞಾನ ಅಭಿವೃದ್ಧಿಯ ಜೊತೆಗೆ ಸಮಾಜಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಸಂಸ್ಥೆ ಕೈಗೊಂಡ ಹಲವಾರು ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು ಮತ್ತು ಭವಿಷ್ಯದಲ್ಲಿ ಇಂತಹ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉತ್ಸುಕರಿರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಂಪನಿ ಮಾತೃ ಸಂಸ್ಥೆ ಟೆಕ್ನೋಪ್ರೊ ಜಪಾನ್ನ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕಂಪನಿಯ ಉದ್ಯೋಗಿ ನಾಗೇಶ್ ದೊಂಡಿಯ ಸ್ವಾಗತಿಸಿ, ವಂದಿಸಿದರು
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…