ಮಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಆರು ತಿಂಗಳು ಕಳೆಯುವುದರೊಳಗೆ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ. ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುವ ಅವಕಾಶವನ್ನು ನನಗೆ ನೀಡಿದ್ದಾರೆ.
ನಮ್ಮ ರಾಜ್ಯದ ಬಜೆಟ್ ಗಾತ್ರ 3 ಲಕ್ಷದ 78 ಕೋಟಿ ರೂಪಾಯಿ. ಆದರೆ ವಾರ್ಷಿಕ 56000 ಕೋಟಿ ರೂಪಾಯಿ ಹಣವನ್ನು ನಮ್ಮ ಪಂಚ ಗ್ಯಾರಂಟಿ ಯೋಜನೆಗಳಿಗೆ ವ್ಯಯ ಮಾಡಬೇಕಿದೆ. ರಾಜ್ಯದ ಜನತೆಗೆ ನೀಡಿರುವ ಉಚಿತ ವಿದ್ಯುತ್ ಬಿಲ್ ಯೋಜನೆ, ವಿದ್ಯಾವಂತ ನಿರುದ್ಯೋಗಿ ಭತ್ಯೆ, ಶಕ್ತಿ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ಯೋಜನೆ, ಅನ್ನ ಭಾಗ್ಯ ಯೋಜನೆಯಲ್ಲಿ 5 ಕೆಜಿ ಇದ್ದ ಅಕ್ಕಿಯನ್ನು 10 ಕೆಜಿಗೆ ಏರಿಕೆ, ಮಹಿಳೆಯರ ಖಾತೆಗೆ ನೇರವಾಗಿ ಜಮೆ ಮಾಡುವ ಗೃಹಲಕ್ಷ್ಮಿ ಯೋಜನೆ ಇದೆಲ್ಲ ನಮ್ಮ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ“ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತಾಡಿದರು.
ವಿದ್ಯಾವಂತ ಫಲಾನುಭವಿಗಳಲ್ಲಿ 4240 ಅಭ್ಯರ್ಥಿಗಳು, ಗೃಹಲಕ್ಷ್ಮಿ ಯೋಜನೆಯಲ್ಲಿ 3,72,300 ಮಹಿಳೆಯರು, ಶಕ್ತಿ ಯೋಜನೆಯಲ್ಲಿ 6 ಕೋಟಿ 79 ಲಕ್ಷ ಮಹಿಳೆಯರು ಪ್ರಯಾಣ, ಅನ್ನ ಭಾಗ್ಯ ಯೋಜನೆಯಡಿಯಲ್ಲಿ 2,59,730 ಪಡಿತರ ಚೀಟಿ ಹೊಂದಿದವರ ಖಾತೆಗೆ 5.61 ಲಕ್ಷ ಅರ್ಹ ಫಲಾನುಭವಿಗಳಿದ್ದು 282.03 ಕೋಟಿ ವರ್ಗಾವಣೆ ಸೇರಿ ದಕ್ಷಿಣ ಕನ್ನಡ ಜಿಲ್ಲೆಗೆ 1464 ಕೋಟಿ 21 ಲಕ್ಷದ 94,500 ಹಣ ಬಂದಿದೆ.
ಸರಕಾರದಲ್ಲಿ ಹಣವಿಲ್ಲ ಅಭಿವೃದ್ಧಿ ಕಾರ್ಯ ನಿಂತಿದೆ ಎಂದು ಬಿಜೆಪಿ ಸಹಿತ ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ, ಹಾಗಾದರೆ ಜಿಡಿಪಿಯಲ್ಲಿ ನಮ್ಮ ರಾಜ್ಯ ದೇಶದಲ್ಲೇ ಪ್ರಥಮ ಹೇಗೆ ಬಂದಿದೆ? ನಮ್ಮ ಯೋಜನೆಗಳಲ್ಲಿ ಯಾರಿಗೂ ಪರ್ಸಂಟೆಜ್ ಸಿಗುತ್ತಿಲ್ಲ, ನೇರವಾಗಿ ಅರ್ಹ ವ್ಯಕ್ತಿಗಳ ಖಾತೆಗೆ ಜಮೆ ಆಗುತ್ತಿರುವ ಕಾರಣ ಹಣ ಮಾಡಲು ಆಗುತ್ತಿಲ್ಲ ಇದೇ ಕಾರಣಕ್ಕೆ ಟೀಕೆ ಮಾಡುತ್ತಿದ್ದಾರೆ. ಈ ಯೋಜನೆಗಳಿಂದ ಯಾರೂ ದಿವಾಳಿಯಾಗುವುದಿಲ್ಲ“ ಎಂದು ಹೇಳಿದರು.
“ಮಂಗಳೂರು ಪತ್ರಕರ್ತರ ಸಂಘ ಶ್ಲಾಘನೀಯ ಕಾರ್ಯ ಮಾಡುತ್ತಿದೆ. ಇದರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿರೀಕ್ಷೆಗೂ ಮೀರಿ ಒಳ್ಳೆಯ ಕೆಲಸ ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದೆ. ಮಡಪ್ಪಾಡಿಯಲ್ಲಿ ನಡೆದಿದ್ದ ಗ್ರಾಮ ವಾಸ್ತವ್ಯದಿಂದ ಊರಿಗೆ ಸುಸಜ್ಜಿತ ರಸ್ತೆ ಸಹಿತ ಅನೇಕ ಯೋಜನೆಗಳು ಜಾರಿಯಾಗಿವೆ. ಇದಕ್ಕಾಗಿ ಅಭಿನಂದನೆಗಳು“ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ ಬಿ.ಎನ್., ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮತ್ತಿತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…