ಪುತ್ತೂರು: ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂವರು ಮಹಿಳಾ ಆರೋಪಿಗಳನ್ನು ಶನಿವಾರ ಬಂಧಿಸಿ, ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ರಾಜಾಜಿನಗರ ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಮತ್ತು ದ.ಕ.ಜಿಲ್ಲೆಯ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಬಂಧಿತ ಆರೋಪಿಗಳು.
ದ.12 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್‌ಎಸ್ ರಂತೆ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಎಂಬವರುಗಳನ್ನು ದಸ್ತಗಿರಿ ಮಾಡಿ, ಅವರಿಂದ ಕಳವಾದ ರೂ 25,000/- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ಡಿ.13 ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು, ರೂ 77000 /- ಮೌಲ್ಯದ 09 ಗ್ರಾಂ ತೂಕದ 03 ಚಿನ್ನದ ಉಂಗುರಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಜ್ಯುವೆಲ್ಲರ್ಸ್ ಮಾಲಕರಾದ ಶಿವಪ್ರಸಾದ್ ಭಟ್ ಎಂಬವರು ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2024 ಕಲಂ: 305 ಬಿಎನ್‌ಎಸ್ ರಂತೆ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್…
ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…