ಕುಂದಾಪುರ : ಪ್ರವಾಸಿಗನನ್ನು ಕರೆದೊಯ್ಯತಿದ್ದ ಜೆಟ್‌ಸ್ಕೀ ಬೋಟ್ ಮಗುಚಿ ಬಿದ್ದ ಹಿನ್ನಲೆ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಕುಂದಾಪುರದ ತ್ರಾಸಿ ಕಡಲ ಕಿನಾರೆಯಲ್ಲಿ ಸಂಭವಿಸಿದೆ. ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ನಾಪತ್ತೆಯಾಗಿದ್ದು, ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ.
ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ.
ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್ ಎಂಬವರು ಟೂರಿಸ್ಟ್ ಬೋಟಿನಲ್ಲಿ ಬೋಟಿಂಗ್ ನಡೆಸುತ್ತಿರುವಾಗ ಬೋಟ್ ಪಲ್ಟಿ ಆದ ಪರಿಣಾಮ ಪ್ರವಾಸಿಗ ಹಾಗೂ ರೈಡರ್ ಇಬ್ಬರೂ ನೀರಿಗೆ ಬಿದ್ದ ಪರಿಣಾಮ ರೈಡರ್ ನಾಪತ್ತೆಯಾಗಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದ ಪರಿಣಾಮ ಪ್ರವಾಸಿಗ ಪ್ರಶಾಂತ್ ಬಚಾವ್ ಆಗಿದ್ದಾರೆ.
ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು.
ನಾಪತ್ತೆಯಾದ ರವಿದಾಸ್ ನ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…