ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಡಿ.28 – 29ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೊಂದಾಯಿತ ಕಾರ್ಯಕರ್ತರ ಮಹಾಸಭೆ ಡಿ.22ರಂದು ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಈ ಬಾರಿ ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು ಕಾರ್ಯಕ್ರಮದ ಅಚ್ಚುಕಟ್ಟಾದ ನಿರ್ವಹಣೆಗೆ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದರು.

ಯಾವೂದೇ ಸೂಚನೆ ನೀಡದೆ ಬೆಳಗ್ಗಿನ ಜಾವದವರೆಗೆ ಕಾರ್ಯಕರ್ತರು ಪೇಟೆ ಶೃಂಗಾರ ದಲ್ಲಿ ಕಾರ್ಯಲಯದಲ್ಲಿ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದು, ಅವರಿಗೆ ಧನ್ಯವಾದ ಸಲ್ಲಿಸಿದರು.
ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ಹಲವು ಸೂಚನೆ ನೀಡಿದರು.
ವಿವಿಧ ವಿಭಾಗದ ಕಾರ್ಯಕರ್ತರಿಗೆ ಜವಬ್ದಾರಿ ವಹಿಸಲಾಯಿತು.
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಗೌರವಾಧ್ಯಕ್ಷ ಚಂದಪ್ಪ ಮೂಲ್ಯ, ಪ್ರಮುಖರಾದ ಉಮೇಶ್ ಕೋಡಿಬೈಲು, ಸುನೀಲ್ ಬೋರ್ಕರ್, ಮನೀಶ್ ಕುಲಾಲ್, ಸುಜಿತ್ ಕಜೆ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ರೈ ಕೆದಂಬಾಡಿಮಠ ಸ್ವಾಗತಿಸಿ ಧನ್ಯವಾದಗೈದರು.
ವಿವಿಧ ವಿಭಾಗದ ಇನ್ನೂರರಷ್ಟು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.



