ಕರಾವಳಿ

ಡಿಸೆಂಬರ್ 25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ-“ನೆರವು”

ಮಂಗಳೂರು:  ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಪ್ರದಾನ ಕಾರ್ಯಕ್ರಮ ಡಿಸೆಂಬರ್   25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ.

ಮಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಆಯೋಜಕರಾದ ಎಂ.ಆರ್.ಜಿ. ಗ್ರೂಪ್ ಚೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಅವರು ಈ ವರ್ಷದ “ನೆರವು” ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ, ಕಾಪು ವಿಧನಾಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಉಪಸ್ಥಿತರಿರುತ್ತಾರೆ ಎಂದರು.

 

ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 (ಆರು) ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. (ಒಂದು ಕುಟುಂಬದಲ್ಲಿ ಸರಾಸರಿ ಐದು ಮಂದಿ ಇರುವರೆಂಬ ಲೆಕ್ಕಾಚಾರದಲ್ಲಿ ) . ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ ಹಿಮ್ಮಾಹಿತಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಸಮಾಜದಲ್ಲಿ ಪರಿವರ್ತನೆ ತರಬಲ್ಲಂತಹ, ಸಾಮೂಹಿಕ ಹಿತದ ಕಾರ್ಯಕ್ರಮಗಳನ್ನು ಕೈಗೊಂಡ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದರು.

ಪ್ರತೀ ವರ್ಷದ ಶಿಷ್ಟಾಚಾರದಂತೆ ಫಲಾನುಭವಿಗಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಸ್ವಯಂಸೇವಕರ ತಂಡಗಳಿವೆ. ನೆರವು ವಿತರಣೆ ನಡೆಯುವ ಸ್ಥಳದಲಿ 25 ಕೌಂಟರ್ ಗಳನ್ನು ತೆರೆಯಲಾಗುತ್ತದೆ. ಈಗಾಗಲೇ ವಿತರಣೆ ಮಾಡಿರುವ ಟೋಕನ್ ಗಳನ್ನು ತೋರಿಸಿ ಕೌಂಟರ್ ಗಳಲ್ಲಿ ನೆರವಿನ ಚೆಕ್ ಪಡೆಯಬಹುದು. ಎಲ್ಲಿಯೂ ಅವ್ಯವಸ್ಥೆಗಳಿಗೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ ಎಂದವರು ವಿತರಣಾ ದಿನದ ವ್ಯವಸ್ಥೆಗಳನ್ನು ವಿವರಿಸಿದರು.

ಮಾನಸಿಕ ವಿಕಲತೆ, ಹುಟ್ಟಿನಿಂದ ಬರುವ ದೀರ್ಘಕಾಲೀನ ಚಿಕಿತ್ಸೆ ಅವಶ್ಯವಿರುವ ಖಾಯಿಲೆ ಪೀಡಿತರಿಗೆ, ಅಂಗವೈಕಲ್ಯ, ಕ್ಯಾನ್ಸರ್ ಮುಂತಾದ ಖಾಯಿಲೆಗಳಿಂದ ಬಾಧಿತರಾಗಿರುವವರಿಗೆ ಚಿಕಿತ್ಸೆಗಾಗಿ ಆದ್ಯತೆಯ ಮೇಲೆ ನೆರವು ನೀಡುವುದನ್ನು ಪರಿಗಣಿಸಲಾಗಿದೆ. ಶಿಕ್ಷಣ ಮುಂದುವರಿಸಲು ಕಷ್ಟ ಪಡುತ್ತಿರುವವರಿಗೆ, ಕ್ರೀಡಾ ಕ್ಷೇತ್ರದ ಸಾಧಕರಿಗೆ, ಉತ್ತಮ ಶೈಕ್ಷಣಿಕ ಸಾಧನೆ ಮಾಡಿದವರಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ಅವರನ್ನು “ನೆರವು” ನೀಡಲು ಆಯ್ಕೆ ಮಾಡಲಾಗಿದೆ ಎಂದರು.

ಹಿಂದಿನ ವರ್ಷಗಳಲ್ಲಿ ಸಮುದಾಯ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸಲು ಸಂಘ ಸಂಸ್ಥೆಗಳಿಗೆ ನೀಡಲಾದ ನೆರವು ಆಯಾ ಪರಿಸರದಲ್ಲಿ ಧನಾತ್ಮಕ ಪರಿಣಾಮ ಬೀರಿದೆ. ಸಾರ್ವಜನಿಕ ಆಸ್ತಿಗಳ ನಿರ್ಮಾಣ ಆಗಿದೆ. ಅವಕಾಶವಂಚಿತರು ’ನೆರವು’ ಪಡೆದುಕೊಂಡು ಸ್ವಾವಲಂಬಿಯಾದ ಉದಾಹರಣೆಗಳಿವೆ. ಸಾಮಾಜಿಕ ಜವಾಬ್ದಾರಿಯ ನೆಲೆಯಲ್ಲಿ ನಾವು ಕೈಗೊಂಡ ಈ ಸೇವಾ ರೂಪದ ಕಾರ್ಯಕ್ರಮ ಸಾರ್ವಜನಿಕ ಮನ್ನಣೆ ಪಡೆದಿರುವುದು ಆಯೋಜಕರಾದ ನಮಗೆ ಸಮಾಧಾನ ತಂದಿದೆ. ಸಾರ್ಥಕ್ಯ ಭಾವನೆಯನ್ನು ಮೂಡಿಸಿದೆ. ಅನುಭೂತಿ ಮತ್ತು ಬದ್ಧತೆಯಿಂದ ಕೈಗೊಂಡ “ನೆರವು” ಕಾರ್ಯಕ್ರಮ ಅನುಷ್ಠಾನದಲ್ಲಿ ನಮ್ಮ ತಂಡ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಿದೆ. ಶಿಕ್ಷಣ ಉಪಕ್ರಮದಡಿ ನೆರವು ಪಡೆದವರಲ್ಲಿ ಕೆಲವರು ಈಗ ಉದ್ಯೋಗಸ್ಥರಾಗಿ, ತಾವು ಇತರರಿಗೆ ಸಹಾಯ ಮಾಡುವ ಸ್ಥಿತಿಗೆ ತಲುಪಿರುವುದು ಈ ಯೋಜನೆ ತಂದ ಮಾನವೀಯ ಬದಲಾವಣೆ ಎಂದು ಅವರು ಯೋಜನೆಯ ಫಲಶ್ರುತಿಯನ್ನು ವಿವರಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

7 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago