ದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (92) ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.



