ಕಲಾವಿದರ ಕಾಮಧೇನು ಪಟ್ಲ ಪ್ರತಿಷ್ಠಾನದ ದಶಮಾನೋತ್ಸವಕ್ಕೆ ಪಟ್ಲ ಟ್ರಸ್ಟ್ ನ ಪ್ರಧಾನ ಸಂಚಾಲಕ ಶಶಿಧರ್ ಶೆಟ್ಟಿ ಬರೋಡ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದ್ದಾರೆ.

ಮಂಗಳೂರಿನಲ್ಲಿ ಆಯೋಜನೆಯಾಗಿದ್ದ ಪಟ್ಲ ಪ್ರತಿಷ್ಠಾನ ದಶಮಾನೋತ್ಸವ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಶಶಿಧರ ಶೆಟ್ಟಿ ಬರೋಡಾ ಅವರು “ಪಟ್ಲ ಸತೀಶ್ ಶೆಟ್ಟಿಯವರು ಬಹಳಷ್ಟು ಕಷ್ಟಪಟ್ಟು ಯಕ್ಷಗಾನ ಕಲಾವಿದರಿಗಾಗಿ ಸಂಘಟನೆ ಕಟ್ಟಿದ್ದು ಅದೀಗ ದಶಮಾನೋತ್ಸವದ ಸಂಭ್ರಮದಲ್ಲಿದೆ. ಈ ಬಾರಿ ದಾನಿಗಳ ನೆರವಿನಿಂದ 10 ಕೋಟಿ ರೂ. ಒಟ್ಟುಮಾಡಿ ಅದನ್ನು ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿಯಲ್ಲಿ ಪ್ರತೀವರ್ಷ ಕಲಾವಿದರ ಅಭ್ಯುದಯಕ್ಕಾಗಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಇದಕ್ಕಾಗಿ ದಾನಿಗಳು ಒಂದೇ ಮನಸ್ಸಿನಿಂದ ಕೆಲಸ ಮಾಡಬೇಕು ಎಂದರು. ಇದೇ ಸಂದರ್ಭ ಅವರು ಟ್ರಸ್ಟ್ ದಶಮಾನೋತ್ಸವಕ್ಕೆ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದರು.



