ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಮುದುಗನೂರಿನ ತೋಟದಲ್ಲಿ ಬಚ್ಚಿಟ್ಟಿದ್ದ ತೇಗದ ತುಂಡೊಂದನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು, ಮಾಲೀಕನ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಹನಗೋಡು ಹೋಬಳಿಯ ಮುದಗನೂರಿನ ಗಿರೀಶ್ ಎಂಬುವವರ ತೋಟದಲ್ಲಿ ತೇಗದ ತುಂಡು ಪತ್ತೆಯಾಗಿದ್ದು, ಆತನ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿ ಮೇರೆಗೆ ಎಸ್ ಟಿಪಿಎಫ್ ತಂಡ ಬುಧವಾರ ಸಂಜೆ ತೋಟದ ಮೇಲೆ ದಾಳಿ ನಡೆಸಿ ತೇಗದ ತುಂಡನ್ನು ಪತ್ತೆ ಹಚ್ಚಿ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗಕ್ಕೆ ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಮಣ್ಣಿನಲ್ಲಿ ಒಂದು ಮೀ. ದಪ್ಪ ಹಾಗೂ 2.30.ಮೀ. ಉದ್ದದ ತೇಗದ ತುಂಡನ್ನು ಮಣ್ಣಿನಲ್ಲಿ ಹೂತು ತೆಂಗಿನ ಗರಿಗಳಿಂದ ಮುಚ್ಚಿಟ್ಟಿದ್ದನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ನಾಪತ್ತೆಯಾಗಿದ್ದು, ಪತ್ತೆಗೆ ಕ್ರಮವಹಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳ ಮಾಹಿತಿ ದೊರೆತಿದ್ದು, ತನಿಖಾ ಹಂತದಲ್ಲಿದೆ. ಅವರ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದೆಂದು ಆರ್ ಎಫ್.ಒ. ನಂದಕುಮಾರ್ ಮಾಹಿತಿ ತಿಳಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…