ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ತೆರೆದ ಒಳಚರಂಡಿಯಿಂದ ದುರ್ವಾಸನೆ; ರೋಗಗಳ ಭೀತಿ..!

ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಸರಕಾರಿ ಜೂನಿಯರ್ ಕಾಲೇಜಿಗೆ ಹೋಗುವ ರಸ್ತೆ ಕ್ರಾಸ್ ಬಳಿ ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ತೆರೆದ ಒಳಚರಂಡಿಯಲ್ಲಿ ಹರಿದು ಹೋಗದೆ ಪರಿಸರ ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿದ್ದು ರೋಗಗಳ ಭೀತಿ ಎದುರಾಗಿದೆ.

ಬಹು ಮಹಡಿ ಕಟ್ಟಡದ ಮಾಲಕರು ಕಟ್ಟಡದ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಬಿಡುತ್ತಿದ್ದಾರೆ.ಈ ಬಗ್ಗೆ ಅನೇಕ ಬಾರಿ ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದರೂ ಸೂಕ್ತ ಚರಂಡಿ ವ್ಯವಸ್ಥೆ, ಸರಿಪಡಿಸಿಲ್ಲ ಹಾಗೂ ತೆರೆದ ಸಾರ್ವಜನಿಕ ಚರಂಡಿಗೆ ಕಟ್ಟಡದ ತ್ಯಾಜ್ಯ ನೀರು ಬಿಡುವ ಮಾಲಕರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪಂಚಾಯತ್ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಇದೇ ಪರಿಸರದಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದು ಕೂಡಲೇ ಮುಲ್ಕಿ ನಗರ ಪಂಚಾಯತಿ ಅಧಿಕಾರಿಗಳು ಎಚ್ಚೆತ್ತು ಒಳಚರಂಡಿ ವ್ಯವಸ್ಥೆ, ಸರಿಪಡಿಸುವುದೇ ಅಲ್ಲದೆ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಹರಿಯ ಬಿಡುತ್ತಿರುವ ಬಹು ಮಹಡಿ ಕಟ್ಟಡದ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!