ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಅಮ್ಟೂರು ಶ್ರೀ ಕೃಷ್ಣ ಮಂದಿರದ 25ನೇ ವಾರ್ಷಿಕ ಮಹೋತ್ಸವ ಸಂಭ್ರಮ

ಬಂಟ್ವಾಳ: ಶ್ರೀರಾಮ ಮತ್ತು ಶ್ರೀ ಕೃಷ್ಣ ದೇಶದ ಮಣ್ಣಿನ ಚಿಂತನೆಯನ್ನು ಕೊಟ್ಟವರು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಶ್ರೀ ಕೃಷ್ಣ ಮಂದಿರ ಅಮ್ಟೂರು ಇದರ 25ನೇ ವರ್ಷದ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಿಂದೂ ಸಮಾಜ ಅಸಂಘಟಿತ ವಾಗಿದ್ದಾಗ ಈ ದೇಶಕ್ಕೆ ಮುಸಲ್ಮಾನರ ಆಕ್ರಮಣವಾಗಿತ್ತು. ಇದು ಶ್ರೀರಾಮ, ಶ್ರೀ ಕೃಷ್ಣರ ಭೂಮಿ ಹೊರತು ಇದು ಬೇರ್‍ಯಾರಿಗೂ ಸೇರಿದ್ದಲ್ಲ. ಈ ಬಗ್ಗೆ ಹಿಂದೂ ಸಮಾಜ ಜಾಗೃತವಾಗಿರಬೇಕು ಎಂದು ತಿಳಿಸಿದರು.


ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರನಂದ ಸ್ವಾಮೀಜಿ ಆಶೀರ್ವಚನ ನೀಡಿ 25 ವರ್ಷಗಳ ಹಿಂದೆ ಶ್ರೀ ಕೃಷ್ಣ ಮಂದಿರ ಮಂದಿರ ನಿರ್ಮಿಸುವ ಮೂಲಕ ಇಲ್ಲಿ ಧರ್ಮ ಬಿತ್ತುವ ಕೆಲಸ ಆಗಿದೆ ಎಂದರು. ಭಗವದ್ಗೀತೆಯನ್ನು ಅಳವಡಿಸಿಕೊಂಡು ಬೇರೆ ದೇಶಗಳು ಸದೃಢವಾಗಿದೆ. ಆದರೆ ಭಾರತ ಅಳವಡಿಸಿಕೊಳ್ಳದೆ ಇರುವುದರಿಂದ ಸದೃಡವಾಗಿಲ್ಲ. ಸ್ಮಾರ್ಟ್ ಸಿಟಿ ಮಂಗಳೂರು ಡ್ರಗ್ ಸಿಟಿಯಾಗುತ್ತಿದೆ. ಹಿಂದೂ ಸಮಾಜ ಸದೃಢವಾಗಬೇಕಾದರೆ ಜಾತಿಯಿಂದ ಹೊರ ಬಂದು ಹಿಂದೂ ಎನ್ನುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು.
ವಾಗ್ಮಿ ಹಾರಿಕಾ ಮಂಜುನಾಥ್ ಧಾರ್ಮಿಕ ಭಾಷಣ ಮಾಡಿದರು.
ಉದ್ಯಮಿಗಳಾದ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಅಧ್ಯಕ್ಷತೆ ವಹಿಸಿದ್ದರು. ಮಮತಾ ಶೆಟ್ಟಿ
ರವಿರಾಜ ಸಾಲೆತ್ತೂರು, ಮಹಾಬಲ ಕೊಟ್ಟಾರಿ, ಸತೀಶ್ ಆಳ್ವ ಇರಾಬಾಳಿಕೆ, ಆನಂದ ಆಳ್ವ ಗೋಳ್ತಮಜಲು, ನಿವೃತ್ತ ಸೈನಿಕ ಸೋಮಪ್ಪ ಪೂಜಾರಿ ಅಮ್ಟೂರು
ಡಾ. ಸ್ವಾಮಿ, ಶಂಕರನಾರಾಯಣ ಐತಾಳ್, ಲಕ್ಷ್ಮೀ ವಿ.ಪ್ರಭು, ಮಂದಿರದ ಅಧ್ಯಕ್ಷ ರಮೇಶ್ ಶೆಟ್ಟಿಗಾರ್ ಕರಿಂಗಾಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮ್ಟೂರು ಸ್ವಾಗತಿಸಿದರು. ಮಂದಿರದ ಪ್ರಧಾನ ಕಾರ್ಯದರ್ಶಿ ಕುಶಾಲಪ್ಪ ಅಮ್ಟೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ ಕೊಟ್ಟಾರಿ ಗೋಳ್ತಮಜಲು, ಸಂತೋಷ್ ಬೇಂಕ್ಯ ಕಾರ್ಯಕ್ರಮ ನಿರೂಪಿಸಿದರು.

 

 

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!