ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಯೋಜನೆಯಡಿ ಸಾಮಾಜಿಕ ಕಳಕಳಿಯ ಸಮಾಜಮುಖಿ ಕಾರ್ಯಕ್ರಮ ಮಂಗಳೂರಿನ ಬಂಟ್ಸ್ ಹಾಸ್ಟೇಲ್‌ನಲ್ಲಿ ನಡೆದಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮ ದೀಪಬೆಳಗಿಸುವ ಮೂಲಕ ಉದ್ಘಾಟನೆಗೊಂಡಿತು. ಬಳಿ ಕ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಶೆಟ್ಟಿಯವರು ಮಾತನಾಡಿ, ದಾನಿಗಳ ಸಹಕಾರದಿಂದ ಇಂತಹ ಮಹತ್ಕರ್ಯ ನಡೆಯುತ್ತಿದೆ ಎನ್ನುತ್ತಾ ಜಾಗತಿಕ ಬಂಟರ ಸಂಘಗಳಿAದ ನಡೆದ ಕಾರ್ಯಕ್ರಮವನ್ನು ಮೆಲುಕು ಹಾಕಿದ್ರು. ಜೊತೆಗೆ ದಾನಿಗಳನ್ನ ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಮಾತನಾಡಿ, 2005ರಲ್ಲಿ ಶುರುವಾದ ಈ ಸಮಾಜಮುಖಿ ಕಾರ್ಯಕ್ರಮ ಇಂದಿಗೂ ಮುಂದುವರೆಯುತ್ತಿದೆ. ಐಕಳ ಹರೀಶ್ ಶೆಟ್ಟಿಯವರ ನಾಯಕತ್ವದ ಬಗ್ಗೆ ಹೆಮ್ಮೆಯ ನುಡಿಗಳನ್ನಾಡಿದ್ರು. ಕಾರ್ಯಕ್ರಮದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಡಾ. ಅವಿನ್ ಆಳ್ವ ಅವರನ್ನ ಸನ್ಮಾನಿಸಲಾಯಿತು. ಬಳಿಕ ವೈದ್ಯಕೀಯ ಚಿಕಿತ್ಸೆಗೆ ಹಾಗೂ ಮದುಮೆಗೆ ಸಹಾಯ ಧನದ ಚೆಕ್‌ನ್ನು ಸುಮಾರು 100 ಮಂದಿ ಫಲಾನುಭವಿಗಳಿಗೆ ವಿತರಿಸಲಾಯಿತು.
ಇನ್ನು ಈ ಕಾರ್ಯಕ್ರಮದಲ್ಲಿ ಗೌರವ ಕಾರ್ಯದರ್ಶಿಯಾದ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ, ಪೋಷಕ ಸದಸ್ಯರು ದಯಾನಂದ್ ಶೆಟ್ಟಿ ಆಸ್ಟ್ರೇಲಿಯ, ಸುಧಾಕರ್ ಪೂಂಜ, ಅಕ್ಕುಂಜೆ ಸತಿಶ್ಚಂದ್ರ ಶೆಟ್ಟಿ, ಸದಸ್ಯ ಬಂಟರ ಸಂಘಗಳ ಪ್ರತಿನಿಧಿಗಳಾದ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಲೋಕಯ್ಯ ಶೆಟ್ಟಿ, ಪುತ್ತೂರಿನ ಯುವ ಬಂಟರ ಸಂಘದ ಅಧ್ಯಕ್ಷರಾದ ಹರ್ಷ ಕುಮಾರ್ ರೈ ಮಾಡಾವು, ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷರಾದ ಗೀತಾ ಮೋಹನ್ ರೈ, ಸತ್ಯಪ್ರಸಾದ್ ಶೆಟ್ಟಿ ಅಧ್ಯಕ್ಷರು ಜಪ್ಪಿನಮೊಗರು ಬಂಟರ ಸಂಘ, ಸಂತೋಷ್ ಶೆಟ್ಟಿ ಅಧ್ಯಕ್ಷರು ಗುರುಪುರ ಬಂಟರ ಮಾತೃ ಸಂಘ, ಸಾಲೆತ್ತೂರು ಬಂಟರ ಸಂಘದ ಅಮರೇಶ್ ಶೆಟ್ಟಿ ತಿರುವಾಜೆ, ಅರವಿಂದ್ ರೈ ಮೂರ್ಜೆಬೆಟ್ಟು, ಉದಯ್ ಕುಮಾರ್ ರೈ ಅಗರಿ, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸುದರ್ಶನ್ ಶೆಟ್ಟಿ ಗುರುಪುರ, ಲೀಲಾಧರ್ ಶೆಟ್ಟಿ ಸುರತ್ಕಲ್, ಪ್ರವೀಣ್ ಶೆಟ್ಟಿ ಸುರತ್ಕಲ್, ಉಲ್ಲಾಸ್ ಆರ್. ಶೆಟ್ಟಿ, ಅಜಿತ್ ಕುಮಾರ್ ಶೆಟ್ಟಿ, ಮೋಹನ್ ರೈ ಪುತ್ತೂರು, ಪ್ರಜ್ವಲ್ ರೈ ಸೊರಕೆ ಪುತ್ತೂರು, ಶ್ರೀಮತಿ ಕುಸುಮ ಶೆಟ್ಟಿ ಪುತ್ತೂರು, ಜಗನ್ನಾಥ್ ಶೆಟ್ಟಿ ಬಾಳ, ಪುಷ್ಪರಾಜ್ ಶೆಟ್ಟಿ ಕುಡಂಬೂರು,ರವಿರಾಜ್ ಶೆಟ್ಟಿ ಜತ್ತಬೆಟ್ಟು, ಕಿಶೋರ್ ಶೆಟ್ಟಿ ದೆಪ್ಪುನಿಗುತ್ತು, ಸೇರಿದಂತೆ ಹಲವರು ಉಪಸ್ಥಿತರಿದ್ರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…