ಇತರೆ

Avacado: ಮಧುಮೇಹಿಗಳಿಗೆ ಉತ್ತಮ, ಹೃದಯದ ಸಮಸ್ಯೆಯನ್ನೂ ಕಡಿಮೆ ಮಾಡುತ್ತದೆ ಈ ಬೆಣ್ಣೆಹಣ್ಣು

ಅವಕಾಡೋ, ಬೆಣ್ಣೆಯಂತೆ ಇರುವ ಬೆಣ್ಣೆ ಹಣ್ಣು ಹಲವಾರು ಪೋಷಕಾಂಶಗಳು ಹೊಂದಿದೆ. ಇದು ಪ್ರತಿಯೊಬ್ಬರಿಗೂ ಇಷ್ಟವಾಗುವಂತಹ ರುಚಿ ಹೊಂದಿದ್ದು, ಇದರಿಂದ ಸಿಗುವ ಲಾಭಗಳ ಬಗ್ಗೆ ತಿಳಿಯೋಣ.

ಆವಕಾಡೊ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ. ಇದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂಬುದು ಗೊತ್ತಿಲ್ಲ. ಇದರಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಶಿಂ ಇದ್ದು, ನಮ್ಮ ದೇಹಕ್ಕೆ ಅಗತ್ಯವಾದ ಇತರ ಪೋಷಕಾಂಶಗಳನ್ನು ಸಹ ಇದು ಒದಗಿಸುತ್ತದೆ. ಹಾಗಾದರೆ ಬೆಣ್ಣೆಹಣ್ಣಿನ ಇತರ ಪ್ರಯೋಜನಗಳೇನು ಎಂಬುದು ಇಲ್ಲಿದೆ. ಅವಕಾಡೊದಲ್ಲಿ ಒಳ್ಳೆಯ ಕೊಬ್ಬು, ನಾರಿನಾಂಶ, ವಿಟಮಿನ್ ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್, ಮತ್ತು ಫೈಟೊಸ್ಟೆರಾಲ್ ಗಳು ಇವೆ. ತಿನ್ನಲು ರುಚಿಕರವಾಗಿ ಇರುವಂತಹ ಅವಕಾಡೊ ಹಣ್ನಿನಲ್ಲಿ ಏಕಪರ್ಯಾಪ್ತ ತೈಲವಿದೆ ಮತ್ತು ಇದು ಕ್ಯಾಲರಿ ಹೆಚ್ಚು ಮಾಡಲ್ಲ. ಆದರೆ ಆರೋಗ್ಯ ವೃದ್ಧಿಸಿ, ಜೀರ್ಣಕ್ರಿಯೆ ಸುಧಾರಿಸುವುದು, ಯಕೃತ್ ನ ಆರೋಗ್ಯ ವೃದ್ಧಿಸುವುದು. ಕೊಬ್ಬು ಸಮತೋಲಿತ ಆಹಾರ ಕ್ರಮಕ್ಕೆ ನೆರವಾಗುವುದು. ಏಕಪರ್ಯಾಪ್ತ ಮತ್ತು ಬಹುಪರ್ಯಾಪ್ತ ಕೊಬ್ಬು ದೇಹದಲ್ಲಿನ ಕೊಲೆಸ್ಟ್ರಾಲ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.ಬೆಣ್ಣೆಹಣ್ಣಿನಲ್ಲಿ ಲುಟೀನ್‌ ಮತ್ತು ಜಿಯಾಕ್ಸಾಂಥಿನ್‌ ಇದ್ದು, ಇದು ನಿಮ್ಮ ಕಣ್ಣುಗಳ ಆರೋಗ್ಯಕ್ಕೆ ಹೆಚ್ಚು ಉತ್ತಮ ಎನ್ನಲಾಗುತ್ತದೆ. ನಿಮ್ಮ ಕಣ್ಣಿನ ದೃಷ್ಟಿಗೆ ಹಾನಿ ಮಾಡುವ ಕಿರಣಗಳ ವಿರುದ್ಧ ಹೋರಾಡಲು ಈ ಹಣ್ಣು ಸಹಾಯ ಮಾಡುತ್ತದೆ. ಬೆಣ್ಣೆಹಣ್ಣಿನಲ್ಲಿ ಫೈಬರ್‌ ಹೆಚ್ಚಾಗಿದ್ದು, ಇದು ನಿಮಗೆ ತೂಕ ಇಳಿಸಲು ಸಹಾಯ ಮಾಡುತ್ತದೆ. ಫೈಬರ್ ಇರುವ ಆಹಾರಗಳನ್ನು ಸೇವನೆ ಮಾಡುವುದರಿಂದ ಹೆಚ್ಚಿನ ಸಮಯದವರೆಗೆ ಹಸಿವಾಗುವುದಿಲ್ಲ, ಇದರಿಂದ ಅನಗತ್ಯ ಆಹಾರಗಳನ್ನು ತಿನ್ನದಂತೆ ಸಹಾಯ ಮಾಡುತ್ತದೆ. ಬೆಣ್ಣೆಹಣ್ಣಿನಲ್ಲಿ ವಿಟಮಿನ್‌ ಇ (Vitamin E) ಸಮೃದ್ದವಾಗಿ ಹೊಂದಿದ್ದು, ಇದು ನಿಮ್ಮ ನೆನಪಿನ ಶಕ್ತಿ (Memory Power) ಹೆಚ್ಚಿಸಲು ಸಹಾಯ ಮಾಡುತ್ತದೆ. ಮೆದುಳಿನ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂಬುದನ್ನ ಹಲವು ಅಧ್ಯಯನಗಳು ಸಾಬೀತು ಮಾಡಿದೆ. ಬೆಣ್ಣೆಹಣ್ಣಿನಲ್ಲಿ ಕಾರ್ಬೋಹೈಡ್ರೇಟ್‌ಗಳು ಮತ್ತು ಸಕ್ಕರೆ ಕಡಿಮೆ ಇದ್ದು, ಇದು ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಹಣ್ಣು ಎನ್ನಲಾಗುತ್ತದೆ. ಇದು ಟೈಪ್ 2 ಮಧುಮೇಹವನ್ನು ಶೇಕಡ 20ರಷ್ಟು ಕಡಿಮೆ ಮಾಡುತ್ತದೆ. ಇಷ್ಟೆಲ್ಲಾ ಸಹಾಯಕಾರಿ ಆವಕಾಡೊ ಹಣ್ಣು ತಿನ್ನಲು ಬಲು ರುಚಿ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…

4 hours ago

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…

5 hours ago

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…

5 hours ago

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…

5 hours ago

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ…

5 hours ago

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…

5 hours ago