ಇತರೆ

ರಾಜ್ಯದ ಪ್ರಸಿದ್ಧ ಕ್ಷೇತ್ರದಲ್ಲೂ ಉದ್ಘಾಟನೆಗೊಳ್ಳಲಿದೆ ತಿರುಪತಿ ಮಾದರಿಯ ಕ್ಯೂ ಕಾಂಪ್ಲೆಕ್ಸ್

ರಾಜ್ಯದ ಪ್ರಸಿದ್ಧ ಕ್ಷೇತ್ರದಲ್ಲೂ ಉದ್ಘಾಟನೆಗೊಳ್ಳಲಿದೆ ತಿರುಪತಿ ಮಾದರಿಯ ಕ್ಯೂ ಕಾಂಪ್ಲೆಕ್ಸ್

ಧರ್ಮಸ್ಥಳ : ತಿರುಪತಿ, ಮಂತ್ರಾಲಯಗಳಂತಹ ಪ್ರಸಿದ್ಧ ದೇವಾಲಯಗಳಲ್ಲಿ ಭಕ್ತರ ದಟ್ಟಣೆ ಕಡಿಮೆ ಮಾಡಲು ಮತ್ತು ಭಕ್ತರ ಹಿತ ದೃಷ್ಟಿಯಿಂದ ನಿರ್ಮಿಸಲಾಗಿರುವ ಕ್ಯೂ ಕಾಂಪ್ಲೆಕ್ಸ್ ನಂತೆ, ರಾಜ್ಯದ ಪ್ರಸಿದ್ಧ ಕ್ಷೇತ್ರವಾದ ಧರ್ಮಸ್ಥಳದಲ್ಲೂ  ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ “ಶ್ರೀ ಸಾನಿಧ್ಯ” ವನ್ನು ನಿರ್ಮಿಸಲಾಗಿದೆ. ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ನೂತನ ಶ್ರೀ ಸಾನಿಧ್ಯ ಸಂಕೀರ್ಣ ಇಂದು (ಮಂಗಳವಾರ) ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್​ ಅವರು ಉದ್ಘಾಟಿಸಲಿದ್ದಾರೆ.

ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ಭಕ್ತರಿಗೆ ಹೀಗಾಗಿ ಜನರಿಗೆ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆ ಅನಿವಾರ್ಯವಾಗಿದ್ದು,  ಇಂದು ಶ್ರೀ ಸಾನಿಧ್ಯ ಸಂಕೀರ್ಣದ ಉದ್ಘಾಟನೆಯಾಗಲಿದೆ. ಈ ಸಂಕೀರ್ಣವು 2,75,177 ಚದರ ಅಡಿಯಲ್ಲಿ ನಿರ್ಮಾಣಗೊಂಡಿದ್ದು, ಆಧುನಿಕ ತಂತ್ರಜ್ಞಾನ ಬಳಕೆಯೊಂದಿಗೆ ಭಕ್ತರಿಗೆ ಎಲ್ಲ ಸೌಲಭ್ಯ ನೀಡಲಾಗಿದೆ. 2 ಅಂತಸ್ಥಿನ ಶ್ರೀ ಸಾನಿಧ್ಯ ಸಂಕೀರ್ಣದಲ್ಲಿ ಒಟ್ಟು 16 ವಿಶಾಲ ಭವನಗಳಿವೆ. ಪ್ರತಿ ಭವನದಲ್ಲಿ ಏಕಕಾಲದಲ್ಲಿ 600 ಜನ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಸಕಲ ಸೌಕರ್ಯಗಳನ್ನು ನೀಡಲಾಗಿದೆ. ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದ್ದು, ಸ್ಟೇನ್ಲೆಸ್ ಸ್ಟೀಲ್ ಕುರ್ಚಿಗಳಿದ್ದು, ಹವಾನಿಯಂತ್ರಿತ ಸೌಕರ್ಯ ಕಲ್ಪಿಸಲಾಗಿದೆ. ಭಕ್ತರ ಸಂಖ್ಯೆಯನ್ನು ನಿರ್ಧರಿಸಿ ಭವನದೊಳಗೆ ಕಳುಹಿಸಲು ಎಐ ತಂತ್ರಜ್ಞಾನ ಆಧಾರಿತ ಕ್ಯಾಮೆರಾ ಅಳವಡಿಸಲಾಗಿದೆ. ಭಕ್ತಾಧಿಗಳಿಗೆ ಮಾರ್ಗದರ್ಶನ ನೀಡಲು ಎಲ್ಲೆಡೆ ಡಿಜಿಟಲ್ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದ್ದು, ಭವನ ಸಂಖ್ಯೆ, ದರ್ಶನದ ಅವಧಿ, ದೇವಸ್ಥಾನದ ಇತಿಹಾಸ ಪ್ರಸಾರವಾಗುತ್ತಿರುತ್ತದೆ. ಶ್ರೀ ಸಾನಿಧ್ಯ ಸಂಕೀರ್ಣದ ಭವನಗಳ ದ್ವಾರದಲ್ಲಿ ಸೇವಾ ರಶೀದಿಯ ಕೌಂಟರ್ ಇರಲಿದ್ದು, ಪ್ರತಿ ಭವನದಲ್ಲಿಯೂ ಕ್ಯಾಂಟೀನ್, ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರಿಗೆ ಮಕ್ಕಳ ಆರೈಕೆ ಕೊಠಡಿ ಸೌಲಭ್ಯವನ್ನೂ ಕೊಡಲಾಗಿದೆ. ವಿಶಾಲವಾದ ಭವನದಲ್ಲಿ ಕುರ್ಚಿ ಮೇಲೆ ಕುಳಿತು ನಿಗದಿತ ಸಮಯದಲ್ಲಿ ದೇವರ ದರ್ಶನಕ್ಕೆ ತೆರಳಬಹುದು. ಇದರಿಂದ 6-7 ಗಂಟೆ ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪುತ್ತದೆ. ಒಂದೂವರೆ ಗಂಟೆಯೊಳಗೆ ದರ್ಶನ ಪಡೆಯಬಹುದಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

8 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

8 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

8 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

8 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

8 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

8 hours ago