ಜನ ಮನದ ನಾಡಿ ಮಿಡಿತ

Advertisement

ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ ಕುಟುಂಬಕ್ಕೆ ಚೆಕ್ ಹಸ್ತಾಂತರ..!

ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ ಕುಟುಂಬಕ್ಕೆ ಕರ್ನಾಟಕ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಯೋಜನೆಯಡಿ ರೂ. 8,00,000/- (ರೂಪಾಯಿ ಎಂಟು ಲಕ್ಷ) ಮೊತ್ತದ ಚೆಕ್ ಶಾಸಕ ವೇದವ್ಯಾಸ್ ಕಾಮತ್ ರವರು ಹಸ್ತಾಂತರಿಸಿದರು

ಆಕಸ್ಮಿಕವಾಗಿ ಅಲೆಗಳ ಸೆಳೆತಕ್ಕೆ ಸಿಲುಕಿದ್ದ ಪ್ರಜೀತ್ ರವರನ್ನು ರಕ್ಷಿಸಲು ಅಲ್ಲೇ ಇದ್ದ ಶಿವಾನಂದ ಮತ್ತು ಅವಿನಾಶ್ ಎಂಬ ಮೀನುಗಾರರು ಜೀವದ ಹಂಗು ತೊರೆದು ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ನಂತರದ ದಿನಗಳಲ್ಲಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದ ಶಾಸಕರು ಸರ್ಕಾರದಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ಲಭಿಸುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು.

ಅದರಂತೆ ನೊಂದ ಕುಟುಂಬಕ್ಕೆ ಪರಿಹಾರ ಧನ ಮಂಜೂರು ಮಾಡುವ ಕುರಿತು ಮಂಗಳೂರಿನ ಮೀನುಗಾರಿಕಾ ಇಲಾಖೆ ಉಪನಿರ್ದೇಶಕ (ಪ್ರಭಾರ) ಶ್ರೀ ದಿಲೀಪ್ ಕುಮಾರ್ ರವರು ಸರ್ಕಾರಕ್ಕೆ ಸೂಕ್ತ ದಾಖಲೆಗಳ ಸಹಿತ ಪ್ರಸ್ತಾವನೆಯನ್ನು ಸಲ್ಲಿಸಿದ್ದು ಇದೀಗ ಪರಿಹಾರ ಮೊತ್ತ ವಿತರಣೆಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!