ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷದ ಅವಧಿಗೆ ಅಧಿಕೃತವಾಗಿ ರಮೇಶ್ ಕಂಡೆಟ್ಟು ರವರು ಆಯ್ಕೆಯಾದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಶಾಸಕ ವೇದವ್ಯಾಸ ಕಾಮತ್ ರವರು, ತಮ್ಮ ಅವಧಿಯಲ್ಲಿ ಪಕ್ಷವು ಇನ್ನಷ್ಟು ಸದೃಢವಾಗಿ ಬೆಳೆಯಲಿ, ನಾವೆಲ್ಲರೂ ನಿಷ್ಠಾವಂತ ಕಾರ್ಯಕರ್ತರಾಗಿ ಮಾತೃ ಸಮಾನವಾಗಿರುವ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಜೊತೆಯಾಗಿ ಸಾಗೋಣವೆಂದು ಹಾರೈಸಿದರು.



