ಉಡುಪಿ: ರಸ್ತೆ ದಾಟುತ್ತಿದ್ದ ವೃದ್ಧ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72)ಎಂದು ಗುರುತಿಸಲಾಗಿದೆ.ಶುಕ್ರವಾರ ಬೆಳಗ್ಗೆ ಉಚ್ಚಿಲ ಪೇಟೆಯ ರಿಕ್ಷಾ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಶ್ರೀನಿವಾಸ ತೋಣಿತ್ತಾಯರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.ಈ ವೇಳೆ ಸ್ಥಳೀಯ ಯುವಕರ ತಂಡ ಮೃತದೇಹವನ್ನು ಉಚ್ಚಿಲ ಎಸ್ ಡಿಪಿ ಐ ಅಂಬುಲೆನ್ಸ್‌ನಲ್ಲಿ ಪಡುಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸುವಲ್ಲಿ ಸಹಕರಿಸಿತು.ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…