ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು!

 

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆ ಯಲ್ಲಿ ಶನಿವಾರ ಸಂಜೆ ನಡೆದಿದೆ.

ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಸ್ ಮೃತಪಟ್ಟ ಮಗು. ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.

ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ. ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು.ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!