ಕರಾವಳಿ

ಜಯರಾಮ ಆರ್ತಿಲ ಸ್ಮರಣಾರ್ಥ ರಕ್ತದಾನ ಶಿಬಿರ

ಜೆಸಿಐ ಕಡಬ ಕದಂಬ ಇದರ ಆಶ್ರಯದಲ್ಲಿ ಜೆಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್ , ಮಂಗಳೂರಿನ ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಶಾಖೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆ , ಮಂಗಳೂರುಇವುಗಳ ಸಹಯೋಗದಲ್ಲಿ ಕಡಬ ಜೆಸಿಐನ ಪೂವಾಧ್ಯಕ್ಷ ದಿ.ಜಯರಾಮ ಆರ್ತಿಲ ಅವರ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ರಕ್ತದಾನ ಶಿಬಿರ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

 


ಕಡಬ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಮನುಷ್ಯನ ಜೀವ ಉಳಿಸುವಲ್ಲಿ ರಕ್ತ ಮಹತ್ತರ ಪಾತ್ರವಹಿಸುತ್ತದೆ, ಜಿಲ್ಲೆಯ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಜೆಸಿಐ ನಂತಹ ಸಂಘಟನೆಗಳು ಶ್ರಮಿಸುತ್ತಿವೆ, ಕಡಬದಲ್ಲಿ ಜೆಸಿಐ ನವರು ಅನೇಕ ವರ್ಷಗಳಿಂದ ನಮ್ಮ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ.. ರಕ್ತವನ್ನು ಯಾವುದೇ ರೀತಿಯಿಂದ ಉತ್ಪಾದನೆ ಮಾಡಲು ಸಾಧ್ಯವಿಲ್ಲ, ರಕ್ತದಾನ ಮಾಡುವ ಮೂಲಕವೇ ರಕ್ತ ಸಂಗ್ರಹಣೆ ಮಾಡಬೇಕಿದೆ, ಆರೋಗ್ಯವಂತ ಮನುಷ್ಯ ರಕ್ತದಾನ ಮಾಡುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ, ನಾವು ನೀಡಿದ ರಕ್ತ ನಮ್ಮ ದೇಹದಲ್ಲಿ ಶೀಘ್ರದಲ್ಲಿ ಮರು ಸಂಗ್ರ‍್ರಹಣೆಯಗುತ್ತದೆ. ಇವತ್ತು ವಿದ್ಯಾವಂತರಲ್ಲೂ ರಕ್ತದಾನ ಮಾಡುವುದರ ಬಗ್ಗೆ ತಪ್ಪು ತಿಳುವಳಿಕೆ ಇದೆ, ಈ ಸಂದೇಹಗಳನ್ನು ನಿವಾರಿಸುವಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ, ಯುವ ಜನತೆ ರಕ್ತದಾನ ಮಾಡಲು ಮುಂದೆ ಬರಬೇಕಿದೆ ಎಂದರು.
ಮಂಗಳೂರಿನ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ರಕ್ತನಿಧಿಯ ಸಂಯೋಜಕ ಪ್ರವೀಣ್ ಕುಮಾರ್ ಅತಿಥಿಯಾಗಿ ಮಾತನಾಡಿ, ಜಿಲ್ಲೆಯಲ್ಲಿ ರಕ್ತದ ಅಭಾವ ಕಾಡುತ್ತಿದೆ, ನಾವು ರಕ್ತದಾನ ಮಾಡುವುದರೊಂದಿಗೆ ಇನ್ನೊಬ್ಬರು ರಕ್ತದಾನ ಮಾಡಲು ಪ್ರೇರಣೆ ನೀಡಬೇಕು, ಸಮಾಜದ ಯಾರೂ ಕೂಡಾ ರಕ್ತದ ಕೊರೆತಯಿಂದ ಸಾಯಬಾರದು, ಅದು ನಮ್ಮ ಕಟ್ಟಕಡೆಯ ನಿರ್ಧಾರ ಆಗಬೇಕು, ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು, ಯುವ ಜನತೆ ಮುತುವರ್ಜಿವಹಿಸಬೇಕು ಎಂದರು. ಜೆಸಿಐ ಕಡಬ ಕದಂಬ ಇದರ ಅಧ್ಯಕ್ಷೆ ವಿಶ್ರುತಾ ರಾಜೇಶ್ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ನಾಗರಾಜ್ ಎನ್.ಕೆ., ಜೆಸಿಐ ವಲಯ ನಿರ್ದೇಶಕ ಕಾಶಿನಾಥ್ ಗೋಗಟೆ, ಪೂವಾಧ್ಯಕ್ಷ ಝಾಫಿರ್ ಮಹಮ್ಮದ್, ನಿರ್ದೆಶಕ ಪ್ರೇಮ್‌ಜಿತ್ ಮಾರ್ಟಸ್ , ಗೀತಾ ಜಯರಾಮ ಆರ್ತಿಲ ಉಪಸ್ಥಿತರಿದ್ದರು.
ಜೆಸಿಐ ಕಡಬ ಕದಂಬದ ಪೂರ್ವಾಧ್ಯಕ್ಷ ಅಭಿಷೇಕ್ ಸ್ವಾಗತಿಸಿದರು. ಕಾರ್ಯದರ್ಶಿ ನವ್ಯ ಶ್ರೀಕೃಷ್ಣ ಮಾಣಿಪ್ಪಾಡಿ ವಂದಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

1 hour ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

2 hours ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

2 hours ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

2 hours ago

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…

2 hours ago

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…

2 hours ago