ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವಾ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು.
ಮೊದಲಿಗೆ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್‌ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿಗಳಾದ ಸಂಜೀವ ಶೆಟ್ಟಿ ತಿಂಬರ ಮುಂಬೈ, ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ನಾರಾಯಣ ಹೆಗ್ಡೆ, ಮುಖ್ಯ ಅತಿಥಿಗಳಾಗಿ ಪಾಲ್ ಪಡೆದರು. ಉದ್ಯಮಿ ಸೀತಾರಾಮ ಶೆಟ್ಟಿ ತಿಂಬರ, ನೀರಜ್ ಶೆಟ್ಟಿ, ಮಂಗಲ್ಪಾಡಿ ಪಂಚಾಯ್ತಿನ ಮಾಜಿ ಸದಸ್ಯರಾದ ವಲ್ಸರಾಜ್, PNR ಪ್ರೊಡಕ್ಷನ್‌ನ ರಾಘವೇಂದ್ರ ಹೊಳ್ಳ ತಿಂಬರ ಹಾಗೂ ಇತರರು ಉಪಸ್ಥಿತರಿದ್ದರು.
ನಿರ್ದೇಶಕರಾದ ರೋಷನ್ ಆರ್ ಆಳ್ವ ತಿಂಬರ, ಛಾಯಾಗ್ರಾಹಕರಾದ ಅರುಣ್ ರೈ ಪುತ್ತೂರು, ನಾಯಕ ನಟ ನವೀನ್, ನಾಯಕಿ ಅಮೃತ ಹಾಗೂ ಇತರ ಕಲಾವಿದರು ಹಾಗೂ ತಂತ್ರಜ್ಞರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಹರ್ಷರಾಜ್ ನಾವೂರು ಕಾರ್ಯಕ್ರಮವನ್ನು ನಿರೂಪಿಸಿದರು. ಚಿತ್ರದಲ್ಲಿ ಖ್ಯಾತ ಕಲಾವಿದರಾದ ದೀಪಕ್ ರೈ ಪಾಣಾಜೆ, ಪ್ರಕಾಶ್ ತೂಮಿನಾಡು, ಪುಷ್ಪರಾಜ್ ಬೊಳ್ಳಾರ್ ಸೇರಿದಂತೆ ಹಲವು ತುಳು ಮತ್ತು ಕನ್ನಡ ಚಲನಚಿತ್ರ ತಾರೆಯರು ಬಣ್ಣ ಹಚ್ಚಲಿದ್ದಾರೆ ಎಂದು ಚಿತ್ರದ ನಿರ್ದೇಶಕ ರೋಶನ್ ಆರ್ ಆಳ್ವ ಮಾಹಿತಿ ನೀಡಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…