1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ “ಗಾಂಧಿ ಭಾರತ ಮರು ನಿರ್ಮಾಣ” ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.
ಸುವರ್ಣ ಸೌಧದ ಆವರಣದಲ್ಲಿ ಸ್ಥಾಪಿಸಿರುವ ಬೃಹತ್ ಗಾಂಧಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಈ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.
1924 ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು,ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ,ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ,ಅಕಾಲಿಗಳಿಗೆ ಅಭಿನಂದನೆ,ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು,ಅಸ್ಪೃಶ್ಯತೆ ನಿವಾರಣೆ,ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು ಈ ಪುಸ್ತಕಗಳು ಒಳಗೊಂಡಿವೆ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ,ವಿಧಾನಸಭಾಧ್ಯಕ್ಷ ಯು.ಟಿ.ಖಾದರ್,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದರಾದ ಪ್ರಿಯಾಂಕಾ ಗಾಂಧಿ,ಕೆ.ಸಿ.ವೇಣುಗೋಪಾಲ,ರಣದೀಪ್‌ಸಿಂಗ್ ಸುರ್ಜೇವಾಲಾ,ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ,ಸಚಿವರಾದ ಎಚ್.ಕೆ.ಪಾಟೀಲ,ಡಾ.ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…