ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಬಗ್ಗೆ ಪೋಷಕರಿಗೆ ಇರುವಷ್ಟೇ ಜವಬ್ದಾರಿ ಶಿಕ್ಷಕರಿಗೂ ಇರುತ್ತದೆ ಗ್ರಾ.ಪಂ ಅಧ್ಯಕ್ಷೆ ಗೀತಾ ಸುರೇಶ್

ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷೆ ಗೀತಾ ರವರು, ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳು ಶಿಕ್ಷಕರ ನಡೆ ನುಡಿಗಳನ್ನು ಅನುಕರಣೆ ಮಾಡುತ್ತಾರೆ. ಆದ್ದರಿಂದ ಶಿಕ್ಷಕರು ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಸಲಹೆ ನೀಡಿದರು.
ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಮಾತನಾಡಿ ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು.

ತಾ.ಪಂ.ಮಾಜಿ ಸದಸ್ಯ ಕೆ ಗಣಪತಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಕುಮಾರಸ್ವಾಮಿ, ಮೈಸೂರು
ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸದಸ್ಯ ನೇರಳಕುಪ್ಪೆ ಮಹದೇವ್, ಹಳೇ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷ ಎಚ್ ಆರ್ ಶ್ರೀನಿವಾಸ್ ಮಾತನಾಡಿದರು. ಮುಂದಿನ ತಿಂಗಳು ನಿವೃತ್ತಿ ಗೊಳ್ಳುವ ಶಾಲೆಯ ಮುಖ್ಯಶಿಕ್ಷಕ ದೊಡ್ಡ ಸ್ವಾಮಿ, ಸಹಶಿಕ್ಷಕ ಸ್ವಾಮಿ ಹಾಗೂ ವರ್ಗವಣೆ ಗೊಳ್ಳುವ ಸಿ ಆರ್ ಪಿ ಧರ್ಮರಾಜ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಭೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ರುಕ್ಮಿಣಿ ಸುರೇಶ್,ತಾ.ಪಂ ಮಾಜಿ ಸದಸ್ಯೆ ಪುಷ್ಪಲತಾ, ಗ್ರಾ.ಪಂ.ಸದಸ್ಯರಾದ ಉದಯನ್, ಅಮಾಸೆಗೌಡ, ಜವರಮ್ಮ, ಜಗದೀಶ, ಮುಖಂಡರಾದ ಕೆ ಎಸ್ ಆನಂದ್, ಲೋಕೇಶ್, ಸದಾಶಿವ, ಉಜ್ಜನಿಗೌಡ, ಬಾಬು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗೇಂದ್ರ, ಉಪಾಧ್ಯಕ್ಷೆ ಚಂದ್ರಕಲಾ, ಸದಸ್ಯರಾದ ಮನು, ಕೆ ಬಿ ಕುಮಾರ್, ಮಹೇಶ್, ರಾಜ, ಶಿಕ್ಷಕರಾದ ಗಂಗರಾಜ್, ರೂಪ, ಛಾಯಾನಾಗೇಗೌಡ, ದೇವರಾಜ್, ಪ್ರಿಯಾಂಕ ಸೇರಿದಂತೆ ಇತರೆ ಮುಖಂಡರು ಹಾಗೂ ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.



