ಬಂಟ್ವಾಳ; ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಟ; ಆರೋಪಿಗಳ ಬಂಧನ..!!
ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಕೊಡ್ಮಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಪವನ್ ಎಂಬಾತನ ಜೊತೆ ಇನ್ನಿಬ್ಬರು ಪರಾರಿಯಾಗಿದ್ದು,ಉಳಿದಂತೆ ಆರೋಪಿಗಳಾದ ಲ್ಯಾನ್ಸಿ ರೋಡ್ರಿಗಸ್, ಶಂಶುದ್ದೀನ್, ಜಾಫರ್ ಸಾಧಿಕ್ , ಪ್ರವೀಣ್,ಅರವಿಂದ, ಉಮಾಶಂಕರ, ಪ್ರವೀಣ,ಶೋಧನ್ ,ವಿಜಯ ಕುಮಾರ್, ಮಹಮದ್ ಕಬೀರ ರವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ. ಅವರ ಬಳಿ ಇದ್ದ ನಗದು ರೂ 20500 ಹಾಗೂ ರೂ 1180 ಮೌಲ್ಯದ ಜುಗಾರಿ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಮ್ಮ ತಮ್ಮ ಸ್ವಂತ ಲಾಭಕ್ಕಾಗಿ ಹಣವನ್ನು ಪಣವಾಗಿಟ್ಟು ಸಂಘಟಿತರಾಗಿ ಉಲಾಯಿ ಪಿದಾಯಿ ಜೂಜಾಟ ಆಡಿದ್ದಾರೆ. ಆಪಾದಿತರ ವಿರುದ್ಧ ಕಲಂ 112 ಬಿಎನ್‌ಎಸ್ ಮತ್ತು 87 ಕರ್ನಾಟಕ ಪೊಲೀಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…