ವಿಶೇಷ ವರದಿ

ಬಂಟ್ವಾಳ; ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಟ; ಆರೋಪಿಗಳ ಬಂಧನ..!!

ಬಂಟ್ವಾಳ; ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಟ; ಆರೋಪಿಗಳ ಬಂಧನ..!!

ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಕೊಡ್ಮಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಪವನ್ ಎಂಬಾತನ ಜೊತೆ ಇನ್ನಿಬ್ಬರು ಪರಾರಿಯಾಗಿದ್ದು,ಉಳಿದಂತೆ ಆರೋಪಿಗಳಾದ ಲ್ಯಾನ್ಸಿ ರೋಡ್ರಿಗಸ್, ಶಂಶುದ್ದೀನ್, ಜಾಫರ್ ಸಾಧಿಕ್ , ಪ್ರವೀಣ್,ಅರವಿಂದ, ಉಮಾಶಂಕರ, ಪ್ರವೀಣ,ಶೋಧನ್ ,ವಿಜಯ ಕುಮಾರ್, ಮಹಮದ್ ಕಬೀರ ರವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ. ಅವರ ಬಳಿ ಇದ್ದ ನಗದು ರೂ 20500 ಹಾಗೂ ರೂ 1180 ಮೌಲ್ಯದ ಜುಗಾರಿ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಮ್ಮ ತಮ್ಮ ಸ್ವಂತ ಲಾಭಕ್ಕಾಗಿ ಹಣವನ್ನು ಪಣವಾಗಿಟ್ಟು ಸಂಘಟಿತರಾಗಿ ಉಲಾಯಿ ಪಿದಾಯಿ ಜೂಜಾಟ ಆಡಿದ್ದಾರೆ. ಆಪಾದಿತರ ವಿರುದ್ಧ ಕಲಂ 112 ಬಿಎನ್‌ಎಸ್ ಮತ್ತು 87 ಕರ್ನಾಟಕ ಪೊಲೀಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

1 min ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

7 mins ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

10 mins ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

20 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

21 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

22 hours ago