ಉಡುಪಿ: ಬೆಂಗಳೂರಿನ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಯೋನೆಕ್ಸ್ ಸನ್‌ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಲ್ಲಿ ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿ ಅವರು ಮಹಿಳೆಯರ ಡಬಲ್ಸ್ ನಲ್ಲಿ ವಿನ್ನರ್ಸ್, ಸಿಂಗಲ್ಸ್ ಹಾಗೂ ಮಿಶ್ರ ಡಬಲ್ಸ್ ರನ್ನರ್ಸ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಮಾರ್ಚ್ 16ರಿಂದ 22 ರವರೆಗೆ ಗೋವಾದಲ್ಲಿ ನಡೆಯಲಿರುವ ರಾಷ್ಟೀಯ ಚಾಂಪಿಯನ್ ಶಿಪ್ ಟೂರ್ನಿಮೆಂಟ್ ನ ಮೂರು ವಿಭಾಗಗಳಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ. ಡಬಲ್ಸ್ ಪಾಲುದಾರ ಬಾನು ಎಸ್. ಬೆಂಗಳೂರು, ಮಿಶ್ರ ಡಬಲ್ಸ್ ಗೌತಮ್ ಶೆಟ್ಟಿ ಕುಂದಾಪುರ ಪಾಲುದಾರರಾಗಿದ್ದಾರೆ.
ಶಾಲಿನಿ ಶೆಟ್ಟಿ ಮತ್ತು ಬಾನು ಭಾರತದ 50+ ಮಹಿಳೆಯರ ವಿಭಾಗದಲ್ಲಿ ಟಾಪ್ 1 ರ‌್ಯಾಂಕಿಂಗ್ ನಲ್ಲಿದ್ದಾರೆ. 2025 ರ ಜನವರಿ 22 ರಿಂದ 28 ರವರೆಗೆ ನಡೆದ ಯೋನೆಕ್ಸ್ ಸನ್‌ರೈಸ್ ಆಲ್ ಇಂಡಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಹಾಗೂ ಪಂಚಕುಲ ಹರಿಯಾಣದಲ್ಲಿ ನಡೆದ ಮಹಿಳೆಯರ ಡಬಲ್ಸ್ ನಲ್ಲಿ ಕೂಡ ಈ ತಂಡ ಗೆದ್ದಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…