ಮಂಗಳೂರು : ಲಯನ್ಸ್ ಜಿಲ್ಲೆ 317D ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿನ ಲಯನ್ಸ್ ಲಿಂಬ್ ಸೆಂಟರ್ ಸಹಯೋಗದಲ್ಲಿ 2024 – 25 ನೇ ಸಾಲಿನ ಲಯನ್ಸ್ ವರ್ಷದ ಲಯನ್ಸ್ ಜಿಲ್ಲಾ ಯೋಜನೆ ಅಡಿಯಲ್ಲಿ 35 ಅರ್ಹ ವಿಕಾಲಾಂಗರಿಗೆ ಕೃತಕ ಅಂಗಗಳನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ವಿಶೇಷ ಯೋಜನೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅರ್ಹ ವಿಕಲಾಂಗರಿಗೆ ಮೀಸಲಾಗಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶೀಘ್ರವೇ ವಿತರಿಸಲಾಗುವುದು, ಫಲಾನುಭವಿಗಳಿಂದ ಅರ್ಜಿಯನ್ನು ಸ್ವೀಕರಿಸುವ ಕಾರ್ಯ ಶುರುವಾಗಿದೆ ಎಂದು ಲಯನ್ಸ್ ಲಿಂಬ್ ಸೆಂಟರ್ ನ ನಿರ್ದೇಶಕರಾಗಿರುವ ಡಾ. ಎಂ. ಶಾಂತರಾಮ್ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಪಘಾತದಲ್ಲಿ ಅಂಗವಿಕಲರಾಗಿರುವವರಿಗೆ ಕೃತಕ ಕಾಲಿನ ಜೋಡಣೆಯ ಪ್ರಕ್ರಿಯೆಯನ್ನು ನಡೆಸಲಾಗುವುದು . ಈ ರೀತಿಯ ಕೃತಕ ಕಾಲುಗಳು ಸಂಪೂರ್ಣ ಸ್ಟೀಲ್ ಲೋಹದಿಂದ ಮಾಡಲ್ಪಟ್ಟಿರುತಗತವೆ, ಒಂದು ಕೃತಕ ಕಾಲಿಗೆ ಅಂದಾಜು ೨. ೫ ಲಕ್ಷ ರೂ ವೆಚ್ಚ ತಗುಲುತ್ತದೆ . ಈ ವೆಚ್ಚವನ್ನು ಲಯನ್ಸ್ ಸಂಸ್ಥೆಯೇ ಖುದ್ದು ಭರಿಸಲಿದೆ ಎಂದರು. ಜೊತೆಗೆ ಯಾವ ರೀತಿಯಾಗಿ ನಡೆದಾಡ ಬೇಕು ಎನ್ನುವ ತರಬೇತಿಯನ್ನು ನಮ್ಮ ಸಂಸ್ಥೆಯವರು ನೀಡುತ್ತಾರೆ . ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮದಂತೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಜಿಲ್ಲೆ 317 ಡಿ ಯ ಭಾರತಿ ಬಿ ಎಂ , ಸುರೇಶ್ ಶೆಟ್ಟಿ , ವಸಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…