ಉಡುಪಿ: ಖಾಸಗಿ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಸಂಭವಿಸಿದೆ. ಉಡುಪಿಯಿಂದ ಮಣಿಪಾಲದತ್ತ ಹೋಗುತ್ತಿದ್ದ ಖಾಸಗಿ ಬಸ್, ಪರ್ಕಳ ಕಡೆ ಹೋಗುತ್ತಿದ್ದ ಟಿವಿಎಸ್ ಮೊಪೆಡ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ರಮೇಶ ಪ್ರಭು (69) ಹಾಗೂ ಸಹಸವಾರೆ ಶ್ರೀದೇವಿ ಪ್ರಭು(42) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



