ಉಡುಪಿ: ಖಾಸಗಿ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಸಂಭವಿಸಿದೆ. ಉಡುಪಿಯಿಂದ ಮಣಿಪಾಲದತ್ತ ಹೋಗುತ್ತಿದ್ದ ಖಾಸಗಿ ಬಸ್, ಪರ್ಕಳ ಕಡೆ ಹೋಗುತ್ತಿದ್ದ ಟಿವಿಎಸ್ ಮೊಪೆಡ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ರಮೇಶ ಪ್ರಭು (69) ಹಾಗೂ ಸಹಸವಾರೆ ಶ್ರೀದೇವಿ ಪ್ರಭು(42) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್…
ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…