ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರಿಗೆ ಥಳಿತ
ಉಡುಪಿ : ಉಡುಪಿ ನಗರದ ಸಿಟಿ ಸೆಂಟರ್‌ನ ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರನ್ನು ಥಳಿಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ನಿಹಾಲ್ ಹಾಗೂ ಪೈಝಲ್ ಎಂದು ತಿಳಿದುಬಂದಿದೆ.
ಈ ಇಬ್ಬರು ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿ, ಉಡುಪಿ ನಗರದಲ್ಲಿರುವ ಸಿಟಿ ಸೆಂಟರ್‌ಗೆ ಹೋಗಿದ್ದರು. ಅಲ್ಲಿ ಮೂರನೇ ಮಹಡಿಯಿಂದ ಕೆಳಗೆ ಬರುವಾಗ ಲಿಫ್ಟ್ ಕೆಟ್ಟು ಹೋಗಿದ್ದರಿಂದ ಆಟೋಮ್ಯಾಟಿಕ್ ಎಕ್ಸಲೆಟರ್ ಮೇಲೆ ನಡೆದುಕೊಂಡು ಕೆಳಗೆ ಬರುತ್ತಿದ್ದಾಗ ಸಿಟಿ ಸೆಂಟರ್ ನ ಇಬ್ಬರು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಿ ಎಕ್ಸಲೇಟರ್ ಮೇಲೆ ಏಕೆ ಬಂದಿದ್ದು ಅಂತ ತಗಾದೆ ತೆಗೆದು ವಿದ್ಯಾರ್ಥಿಗಳಿಗೆ ಮನಸೊ ಇಚ್ಛೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ನಿಹಾಲ್ ತುಟಿ ಒಡೆದು ಗಾಯವಾಗಿದೆ.ಪೈಝಲ್ ಎಂಬಾತನ ಹೊಟ್ಟೆ, ಬೆನ್ನು ಭಾಗಕ್ಕೆ ಕೈಯಿಂದ ಗುದ್ದಿ ಹಲ್ಲೆ ಮಾಡಿರುತ್ತಾರೆ. ತಕ್ಷಣ ಸ್ಥಳೀಯರು ವಿದ್ಯಾರ್ಥಿಗಳನ್ನು ಸಿಬ್ಬಂದಿಯ ಕೈಯಿಂದ ಪಾರು ಮಾಡಿ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಆಘಾತಕ್ಕೊಳಗಾದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…