ಜನ ಮನದ ನಾಡಿ ಮಿಡಿತ

Advertisement

ತೌಡುಗೋಳಿಯಲ್ಲಿ ತಡರಾತ್ರಿ ಅಂಗಡಿಗೆ ನುಗ್ಗಿದ ಕಳ್ಳ

ತೌಡುಗೋಳಿಯಲ್ಲಿ ತಡರಾತ್ರಿ ಅಂಗಡಿಗೆ ನುಗ್ಗಿದ ಕಳ್ಳ

ಕೊಣಾಜೆ :  ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್‌ನ ಅಂಗಡಿಯೊ೦ದರಿ೦ದ ನಗದು ಹಾಗೂ ಸಾಮಗ್ರಿಗಳನ್ನು ಕಳ್ಳತನಗೈದ ಘಟನೆ ನಡೆದಿದೆ.

ತೌಡುಗೋಳಿಯ ವಸಂತ ಮಲಿ ಮಾಲೀಕತ್ವದ ಅಂಗಡಿಗೆ ಸುಮಾರು ಎರಡೂವರೆ ಗಂಟೆ ರಾತ್ರಿ ರಾಡ್ ಸಮೇತ ನುಗ್ಗಿದ ದಢೂತಿ ದೇಹದ ಕಳ್ಳ ಹೊರಗಡೆಯ ಕಬ್ಬಿಣದ ಬಾಗಿಲಿಗೆ ಒಳಗೂ ಹೊರಗೂ ಹಾಕಿದ್ದ ಬೀಗವನ್ನು ಮುರಿದು ಒಳ ನುಗ್ಗಿದ್ದಾನೆ. ಅಲ್ಲಿಂದ ಕ್ಯಾ ಶ್ ಕೌಂಟರ್ ಇರುವ ಕೊಠಡಿಯ ಮರದ ಬಾಗಿಲಿನ ಬೀಗ ಮುರಿಯಲು ಸುಮಾರು ಅರ್ಧ ಗಂಟೆ ಒದ್ದಾಡಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳ ಅಂಗಡಿಗೆ ಬಂದ ಬಳಿಕ ಹಾಕಿದ್ದ ಟಿ ಶರ್ಟ್ ಅನ್ನು ಕಳಚಿದ್ದು ಕ್ಯಾಶ್ ಕೌಂಟರ್ ಗೆ ಒಳನುಗ್ಗುತ್ತಿದ್ದಂತೆಯೇ ಮುಖಕ್ಕೆ ಟೀ ಶರ್ಟ್ ಅನ್ನು ಕಟ್ಟಿಕೊಂಡಿದ್ದಾನೆ. ಪಕ್ಕದಲ್ಲಿದ್ದ ವೈಫೈ ಸಿಸ್ಟನ್ ಕದ್ದೊಯ್ದಿದ್ದು ಸಿಸಿಟಿಯ ಹಾರ್ಡ್ ಡಿಸ್ಕ್ ಎಂದು ಭಾವಿಸಿ ಕದ್ದಿರುವ ಶಂಕೆ ಇದೆ. ಒಟ್ಟಿನಲ್ಲಿ ಅಂದಾಜು ಸುಮಾರು 40 ಸಾವಿರ ರೂ. ಮೌಲ್ಯದ ಸಾಮಗ್ರಿಗಳನ್ನು ಕದ್ದೊಯ್ದಿದ್ದಾನೆ. ಆರೋಪಿಯ ಚಹರೆಯನ್ನು ಹೋಲುವಂತಹ ವ್ಯಕ್ತಿ ಕಳ್ಳತನಗೈದ ಕುರಿತಾಗಿ ಸುಮಾರು 10 ಪ್ರಕರಣಗಳು ದಾಖಲಾಗಿದ್ದು, ಎಲ್ಲೂ ಕೂಡಾ ಮುಖದ ಚಹರೆ ಸ್ಪಷ್ಟವಾಗಿ ಗೋಚರಿಸದಿದ್ದರೂ ಇಲ್ಲಿ ಮುಖ ಸ್ಪಷ್ಟವಾಗಿ ಗುರುತು ಹಿಡಿಯುವಷ್ಟು ನಿಖರವಾಗಿ ಕಾಣುತ್ತಿದೆ. ಸ್ಥಳೀಯರ ಮಾಹಿತಿ ಪ್ರಕಾರ ಆರೋಪಿ ಇದೇ ಅಂಗಡಿಯಿ೦ದ ತಿಂಗಳ ಹಿಂದೆ ಸಾಮಾನು ಖರೀದಿಸಿರುವ ಹಾಗೂ ಪಕ್ಕದ ಹೊಟೇಲ್ ನಲ್ಲಿ ಚಹಾ ಕುಡಿಯಲು ಬಂದಿರುವ ಮಾಹಿತಿ ಲಭ್ಯವಾಗಿದ್ದು, ಆರೋಪಿ ಕಳ್ಳತನಕ್ಕೆ ಬರುವಾಗ ಅಂಗಡಿಯಿ೦ದ ಸುಮಾರು 50 ಮೀಟರ್ ದೂರದಲ್ಲಿ ಕಾರನ್ನು ನಿಲ್ಲಿಸಿದ್ದಾನೆ.

ಪೊಲೀಸರು ಪರಿಶೀಲಿಸಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲೆ ದಾಖಲಾಗಿದೆ. ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!