ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು – ಡಿಕೆಶಿ
ಕಾಪು : ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕಾಪುವಿನ ಶ್ರೀ ಹೊಸಮಾರಿಗುಡಿ ದೇಗುಲದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಾರಿಯಮ್ಮ ಎಲ್ಲರೂ ನೀಡುವ ಹಣ್ಣು, ಹೂವು ಜೊತೆಗೆ ಕೋಳಿಯನ್ನು ಸಹ ಅರ್ಪಿಸಿಕೊಳ್ಳುತ್ತಾಳೆ ಎಂದು ಪುರೋಹಿತರು ಹೇಳಿದರು. ಏಕೆಂದರೆ ಭಕ್ತರು ಭಕ್ತಿಯಿಂದ ನೀಡಿದ್ದನ್ನು ತಾಯಿ ಬೇಡ ಎನ್ನುವುದಿಲ್ಲ. ಭಕ್ತಿಗೆ ದೊಡ್ಡ ಶಕ್ತಿಯಿದೆ” ಎಂದಿದ್ದಾರೆ. ಸರ್ಕಾರದ ಸಹಾಯವಿಲ್ಲದೇ ಭಕ್ತರ ಸಣ್ಣ ಹಾಗೂ ದೊಡ್ಡ ನೆರವಿನಿಂದ ಅತ್ಯದ್ಭುತವಾಗಿ ಮಾರಿಗುಡಿಯನ್ನು ನಿರ್ಮಾಣ ಮಾಡಲಾಗಿದೆ. ಇಂತಹ ವಿಜೃಂಭಣೆಯಿOದ ಕೂಡಿರುವ ದೇವಸ್ಥಾನವನ್ನು ನಾನು ಕರ್ನಾಟಕದಲ್ಲಿ ಎಲ್ಲಿಯೂ ನೋಡಿಲ್ಲ”. ನಮ್ಮ ಸಂಸ್ಕೃತಿಯಲ್ಲಿ ಸ್ತ್ರೀ ದೇವತೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಪ್ರತಿ ಊರಿಗೆ ಹೋದಾಗಲೂ ಮೊದಲು ಕೇಳುವುದು ಇಲ್ಲಿನ ಗ್ರಾಮ ದೇವತೆ ಯಾವುದು ಎಂದು. ಪ್ರತಿ ದೇವರ ಹೆಸರಿನ ಮುಂಭಾಗ ಪತ್ನಿಯರ ಹೆಸರನ್ನು ಸೇರಿಸಿ ಕರೆಯಲಾಗುತ್ತದೆ. ಉದಾಹರಣೆಗೆ ಲಕ್ಷ್ಮೀ ವೆಂಕಟೇಶ್ವರ, ಶಿವ ಪಾರ್ವತಿ ಎಂದು ಹೇಳುತ್ತೇವೆ. ನಾವು ಹುಟ್ಟಿದ ದೇಶವನ್ನು ಮಾತೃಭೂಮಿ ಎಂದರೆ, ಮಾತಾಡುವ ಭಾಷೆಯನ್ನು ಮಾತೃಭಾಷೆ ಎನ್ನುತ್ತಾರೆ” ಎಂದು ತಿಳಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…