ಕೆಎಸ್‌ಆರ್‌ಟಿಸಿ ಬಸ್ಸಿಗೆ ಆಟೋ ರಿಕ್ಷಾ ಡಿಕ್ಕಿ- ಇಬ್ಬರು ಮೃತ್ಯು, ಓರ್ವ ಗಂಭೀರ

ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊoಡ ದಾರುಣ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಂಗಳೂರಿನಿoದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಕೆದಂಬಾಡಿ ಗುಡ್ಡೆ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಿಕ್ಷಾ ಚಾಲಕ ಮಹಮ್ಮದ್ ಅವರ ಎರಡನೇ ಪತ್ನಿ ಜಮೀಲ ಮತ್ತು ಆಕೆಯ ಪುತ್ರಿಯ ಮಗ ತಪ್ಸಿಬ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಿಕ್ಷಾ ಚಾಲಕ ಮಹಮ್ಮದ್ ಗಂಭೀರ ಗಾಯಗೊಂಡಿದ್ದಾರೆ.
ಘಟನೆಗೆ ಸಂಬoಧಿಸಿ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



