ಜನ ಮನದ ನಾಡಿ ಮಿಡಿತ

Advertisement

ಸುಭಾಶ್ಚಂದ್ರರರು ಇನ್ನೆರಡು ವರ್ಷ ಬದುಕುಳಿದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ – ಜಗದೀಶ್ ಕಾರಂತ್

ಸುಭಾಶ್ಚಂದ್ರರರು ಇನ್ನೆರಡು ವರ್ಷ ಬದುಕುಳಿದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ – ಜಗದೀಶ್ ಕಾರಂತ್

 

ಬಿ.ಸಿ.ರೋಡ್ : ಭಾರತದ ಸ್ವಾಭಿಮಾನವನ್ನು ಬಡಿದ್ದೆಬ್ಬಿಸಿದ ಸಿಡಿಲ ಸಂತ ಸ್ವಾಮಿ ವಿವೇಕಾನಂದರು ಹಾಗೂ ಭಾರತದ ಸ್ವಾತಂತ್ರ‍್ಯ ಸಂಗ್ರಾಮಕ್ಕೆ ಹೊಸ ಮುನ್ನುಡಿಯನ್ನು ಬರೆದ ನೇತಾಜಿ ಸುಭಾಷ್ ಚಂದ್ರ ಬೋಸ್‌ರಂತಹ ಮಹಾನ್ ವ್ಯಕ್ತಿಗಳು ಪ್ರಸ್ತುತ ಕಾಲಘಟ್ಟದಲ್ಲೂ ಭಾರತದ ಯುವ ಪೀಳಿಗೆಗೆ ಪ್ರೇರಣೆ ಮತ್ತು ಸ್ಪೂರ್ತಿಯಾಗಿದ್ದಾರೆ ಎಂದು ಹಿ.ಜಾ.ವೇ.ಯ ಕ್ಷೇತ್ರೀಯ ಸಂಯೋಜಕರಾದ ಜಗದೀಶ್ ಕಾರಂತ್ ಹೇಳಿದ್ದಾರೆ.

ಇವರು ಬಿ.ಸಿ.ರೋಡಿನ ಶ್ರೀ ರಕೇಶ್ವರೀ ದೇವಸ್ಥಾನದ ಮುಂಭಾಗದಲ್ಲಿ ಹಿಂದೂ ಜಾಗರಣ ವೇದಿಕೆ, ಬಂಟ್ವಾಳ ತಾಲೂಕು,ಮಂಗಳೂರು ಗ್ರಾಮಾಂತರ ಜಿಲ್ಲೆಯ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ಅವರುಗಳ ಜನ್ಮ ಜಯಂತಿಯ ಪ್ರಯುಕ್ತ ನಡೆದ “ಹಿಂದೂ ಯುವ ಸಮಾವೇಶ”ದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಸ್ವಾಮಿ ವಿವೇಕಾನಂದರು ಅಪ್ಪಟ ರಾಷ್ಟ್ರ ಭಕ್ತರಾಗಿದ್ದರು. ದೈರ್ಯ,ಸಾಹಸ, ಪರಾಕ್ರಮ ಎಲ್ಲಾ ಸದ್ಗುಣಗಳ ಸಮುಚ್ಚಯವನ್ನು ಮೈಗೂಡಿಸಿರುವ ಕ್ರಾಂತಿಕಾರಿ ಸುಭಾಶ್ಚಂದ್ರ ಭೋಸ್ ಅವರು ಬ್ರಿಟಿಷರ ವಿರುದ್ದ ಸೇಡು ತೀರಿಸಲು ಸನ್ನದ್ದರಾಗಿದ್ದರು. ಆದರೆ ಅಹಿಂಸಾ ತತ್ವದಡಿಯಲ್ಲಿ ಮಹಾತ್ಮಗಾಂಧಿ ಮತ್ತವರ ಟೀಂ ಅಸಹಕಾರ ನೀಡಿದ್ದರಿಂದ ಇದು ಸಾಧ್ಯವಾಗಿಲ್ಲ. ಸುಭಾಶ್ಚಂದ್ರರವರು ಇನ್ನೆರಡು ವರ್ಷ ಬದುಕುಳಿದಿದ್ದರೆ ದೇಶವಿಭಜನೆಯಾಗುತ್ತಿರಲಿಲ್ಲ. ಅಂದಿನ ನಮ್ಮ ನಾಯಕತ್ವದ ದೌರ್ಬಲ್ಯದಿಂದಾಗಿಯೇ ದೇಶ ವಿಭಜನೆಯಾಗುವಂತಾಯಿತು ಎಂದು ವಿಶ್ಲೇಷಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!