ಮಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ದ.ಕ. ಜಿಲ್ಲೆಗೆ ಅನ್ಯಾಯಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ದ.ಕ ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಪಿವಿಎಸ್ ಬಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ರಾಜ್ಯ ಸರಕಾರ ಮಂಡಿಸಿರುವ ಬಜೆಟ್ ಜನ ವಿರೋಧಿ, ದಲಿತ, ಕೃಷಿಕರ ವಿರೋಧಿಯಾಗಿದ್ದು ಜಿಲ್ಲೆಯ ಅಭಿವೃದ್ಧಿ ಗೆ ಬಜೆಟ್ ನಲ್ಲಿ ಯಾವುದೇ ಅನುದಾನ ಘೋಷಿಸಿಲ್ಲ ಎಂದು ಆರೋಪಿಸಿದರು. ಬಳಿಕ ನವಭಾರತ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ವಾಪಾಸಾದರು.
ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ರಾಕೇಶ್ ರೈ, ಶಾಂತಿ ಪ್ರಸಾದ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ| ಮಂಜುಳಾ ರಾವ್, ಪ್ರಮುಖರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಮನೋಜ್ ಕುಮಾರ್, ಸುಧೀರ್ ಶೆಟ್ಟಿ, ಜಯಾನಂದ ಅಂಚನ್, ದಿವಾಕರ ಪಾಂಡೇಶ್ವರ, ವಸಂತ ಪೂಜಾರಿ, ಜಿಲ್ಲಾ ಪದಾಧಿಕಾರಿಗಳು ವಿವಿಧ ಮಂಡಲ ಮೋರ್ಚಾ ಪದಾಧಿಕಾರಿಗಳು, ಮನಪಾ ಮಾಜಿ ಸದಸ್ಯರು ಭಾಗವಹಿಸಿದ್ದರು.
ಪ್ರ.ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿ. ಯತೀಶ್ ಆರ್ವಾರ್ ನಿರೂಪಿಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…