ಜನ ಮನದ ನಾಡಿ ಮಿಡಿತ

Advertisement

ಸ್ಥಗಿತಗೊಂಡಿರುವ ರಾಜಕಾಲುವೇ ಕಾಮಗಾರಿ ಪೂರ್ಣಗಿಳಿಸಿ: ಸತ್ಯಪ್ಪ ಅಧ್ಯಕ್ಷರು , ಎಂ.ಎ.ಎಸ್‌ ಫೌಂಡೇಶನ್‌

ಮಂಜುನಾಥ ಬಡಾವಣೆಯ ರಾಜಕಾಲುವೆ ಸುಮಾರು 3 ಕೋಟಿಗಳಿಗೆ ಕೈಗೆತ್ತಿಕೊಂಡು ಕಾಮಗಾರಿ ಅರ್ಧಂಬರ್ಧ ಮಾಡಿ ನಾಪತ್ತೆಯಾದ ಗುತ್ತಿಗೆದಾರ, ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು.

ಹುಣಸೂರು ನಗರದ ಹೃದಯಭಾಗದಲ್ಲಿರುವ ಮಾರುತಿ ಬಡಾವಣೆ, ಮಂಜುನಾಥ ಬಡಾವಣೆಗಳಲ್ಲಿ ರಾಜಕಾಲುವೆ ಹಾದು ಹೋಗುತ್ತಿದ್ದು, ಸದರಿ ರಾಜಕಾಲುವೆ ಸಂಪೂರ್ಣವಾಗಿ ಮುಚ್ಚಿ ಹೋಗಿದ್ದು, ಇದರಿಂದಾಗಿ ಪ್ರತಿಬಾರಿಯೂ ಮಳೆಗಾಲ ಬಂದಾಗ ರಾಜಕಾಲುವೆಯಲ್ಲಿ ಹರಿದು ಹೋಗಬೇಕಾದ ಕೊಳಚೆ ನೀರು, ಮಳೆನೀರು ಈ ಭಾಗದ ಜನರ ಮನೆಗಳಿಗೆ ನುಗ್ಗಿ ಅಪಾರ ನಷ್ಟ ಅನುಭವಿಸಿದ್ದು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸತ್ಯ ಎಂ.ಎ.ಎಸ್‌ ಫೌಂಡೇಶನ್‌ ಸ್ಥಳೀಯ ಜನರೊಂದಿಗೆ ಹಲವಾರು ಹೋರಾಟ ಪ್ರತಿಭಟನೆಗಳ ಮುಖಾಂತರ ಮೈಸೂರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರ ಮೇರೆಗೆ ಜಿಲ್ಲಾಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಸರ್ಕಾರದ ಗಮನಕ್ಕೆ ತಂದಿದ್ದು, ರಾಜಕಾಲುವೆ ನಿರ್ಮಾಣಕ್ಕಾಗಿ ಟೆಂಡರ್‌ ಕರೆದಿದ್ದರು.

 

ಅದರಂತೆ ಮಂಜುನಾಥ ಬಡಾವಣೆಯಲ್ಲಿ ರಾಜಕಾಲುವೆ ನಿರ್ಮಾಣ, ಕೇಂಬ್ರಿಡ್ಜ್‌ ಶಾಲೆಯಿಂದ ಮಾರುತಿ ಬಡಾವಣೆಯವರೆಗೆ ಡ್ರೈನೇಜ್‌ ಕಾಮಗಾರಿ, ಶಬ್ಬೀರ್‌ ನಗರದ ಬಳಿ ಕ್ರಾಸ್‌ ಡೆಕ್‌ ಕಾಮಗಾರಿಗಳಿಗೆ ಟೆಂಡರ್‌ ಕರೆದಿದ್ದು, ಬೆಂಗಳೂರು ಮೂಲದ ವಾಸು ಎಂಬುವರು 3 ಕೋಟಿ ರೂ. ಗಳಿಗೆ ಗುತ್ತಿಗೆ ಪಡೆದು ಕಾಮಗಾರಿ ಪ್ರಾರಂಭ ಮಾಡಿದ್ದು, ಬಿಲ್‌ ಆಗಲಿಲ್ಲ ಎಂಬ ಕಾರಣಕ್ಕೆ ಕಾಮಗಾರಿಯನ್ನು ಅರ್ಧಂಬರ್ಧಕ್ಕೆ ನಿಲ್ಲಿಸಿ ವಾಪಸ್ಸು ಹೊರಟು ಹೋಗಿರುತ್ತಾರೆ. ಇದರಿಂದಾಗಿ ಸಾರ್ವಜನಿಕರು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.ಇನ್ನೇನು ಮಳೆಗಾಲ ಪ್ರಾರಂಭವಾಗಲಿದ್ದು, ಪ್ರತಿಬಾರಿಯಂತೆ ಈ ಬಾರಿಯೂ ನರಕಯಾತನೆಗೆ ಸಿದ್ಧರಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಗುತ್ತಿಗೆ ಪಡೆದ ವಾಸು ರವರು ಕಾಮಗಾರಿ ಸಂಪೂರ್ಣಗೊಳಿಸದೆ ಅರ್ಧಕ್ಕೆ ನಿಲ್ಲಿಸಿರುವುದು ಜನಪ್ರತಿನಿಧಿಗಳ ಗಮನಕ್ಕೆ ಬಂದರೂ ಇವರ ಮೇಲೆ ಕೇಸ್‌ ದಾಖಲಿಸದೆ ಹಾಗೂ ಇವರನ್ನು ಕಪ್ಪುಪಟ್ಟಿಗೆ ಸೇರಿಸುವ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತೆ ವಹಿಸಿರುತ್ತಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಈ ರೀತಿ ನಿರ್ಲಕ್ಷ್ಯತೆ ವಹಿಸಿರುವುದು ಅತ್ಯಂತ ವಿಷಾದನೀಯ ಸಂಗತಿ.

ಕೂಡಲೇ ರಾಜಕಾಲುವೆ ಹಾಗೂ ಟೆಂಡರ್‌ ಕರೆದಿರುವ ಎಲ್ಲಾ ಕಾಮಗಾರಿಗಳನ್ನು ಇನ್ನು ಹದಿನೈದು ದಿನಗಳ ಒಳಗಾಗಿ ಗುತ್ತಿಗೆದಾರ ಕಾಮಗಾರಿ ಪ್ರಾರಂಭಿಸಬೇಕೆಂದು ಮಾಧ್ಯಮದ ಮುಖಾಂತರ ಒತ್ತಾಯಿಸುತ್ತೇನೆ. ತಪ್ಪಿದಲ್ಲಿ ಜನಪ್ರತಿನಿಧಿಗಳ ಅಧಿಕಾರಿಗಳ ನಿರ್ಲಕ್ಷ್ಯತೆ ಖಂಡಿಸಿ ಆ ಭಾಗದ ನಿವಾಸಿಗಳೊಂದಿಗೆ ನಗರಸಭೆ ಎದುರು ಪ್ರತಿಭಟನಾ ಧರಣಿ ಕೈಗೊಂಡು ಸರ್ಕಾರದ ಗಮನಕ್ಕೆ ತರಲಾಗುವುದು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!