ಮಂಜುನಾಥ ಬಡಾವಣೆಯ ರಾಜಕಾಲುವೆ ಸುಮಾರು 3 ಕೋಟಿಗಳಿಗೆ ಕೈಗೆತ್ತಿಕೊಂಡು ಕಾಮಗಾರಿ ಅರ್ಧಂಬರ್ಧ ಮಾಡಿ ನಾಪತ್ತೆಯಾದ ಗುತ್ತಿಗೆದಾರ, ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು.
ಹುಣಸೂರು ನಗರದ ಹೃದಯಭಾಗದಲ್ಲಿರುವ ಮಾರುತಿ ಬಡಾವಣೆ, ಮಂಜುನಾಥ ಬಡಾವಣೆಗಳಲ್ಲಿ ರಾಜಕಾಲುವೆ ಹಾದು ಹೋಗುತ್ತಿದ್ದು, ಸದರಿ ರಾಜಕಾಲುವೆ ಸಂಪೂರ್ಣವಾಗಿ ಮುಚ್ಚಿ ಹೋಗಿದ್ದು, ಇದರಿಂದಾಗಿ ಪ್ರತಿಬಾರಿಯೂ ಮಳೆಗಾಲ ಬಂದಾಗ ರಾಜಕಾಲುವೆಯಲ್ಲಿ ಹರಿದು ಹೋಗಬೇಕಾದ ಕೊಳಚೆ ನೀರು, ಮಳೆನೀರು ಈ ಭಾಗದ ಜನರ ಮನೆಗಳಿಗೆ ನುಗ್ಗಿ ಅಪಾರ ನಷ್ಟ ಅನುಭವಿಸಿದ್ದು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸತ್ಯ ಎಂ.ಎ.ಎಸ್ ಫೌಂಡೇಶನ್ ಸ್ಥಳೀಯ ಜನರೊಂದಿಗೆ ಹಲವಾರು ಹೋರಾಟ ಪ್ರತಿಭಟನೆಗಳ ಮುಖಾಂತರ ಮೈಸೂರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರ ಮೇರೆಗೆ ಜಿಲ್ಲಾಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಸರ್ಕಾರದ ಗಮನಕ್ಕೆ ತಂದಿದ್ದು, ರಾಜಕಾಲುವೆ ನಿರ್ಮಾಣಕ್ಕಾಗಿ ಟೆಂಡರ್ ಕರೆದಿದ್ದರು.
ಅದರಂತೆ ಮಂಜುನಾಥ ಬಡಾವಣೆಯಲ್ಲಿ ರಾಜಕಾಲುವೆ ನಿರ್ಮಾಣ, ಕೇಂಬ್ರಿಡ್ಜ್ ಶಾಲೆಯಿಂದ ಮಾರುತಿ ಬಡಾವಣೆಯವರೆಗೆ ಡ್ರೈನೇಜ್ ಕಾಮಗಾರಿ, ಶಬ್ಬೀರ್ ನಗರದ ಬಳಿ ಕ್ರಾಸ್ ಡೆಕ್ ಕಾಮಗಾರಿಗಳಿಗೆ ಟೆಂಡರ್ ಕರೆದಿದ್ದು, ಬೆಂಗಳೂರು ಮೂಲದ ವಾಸು ಎಂಬುವರು 3 ಕೋಟಿ ರೂ. ಗಳಿಗೆ ಗುತ್ತಿಗೆ ಪಡೆದು ಕಾಮಗಾರಿ ಪ್ರಾರಂಭ ಮಾಡಿದ್ದು, ಬಿಲ್ ಆಗಲಿಲ್ಲ ಎಂಬ ಕಾರಣಕ್ಕೆ ಕಾಮಗಾರಿಯನ್ನು ಅರ್ಧಂಬರ್ಧಕ್ಕೆ ನಿಲ್ಲಿಸಿ ವಾಪಸ್ಸು ಹೊರಟು ಹೋಗಿರುತ್ತಾರೆ. ಇದರಿಂದಾಗಿ ಸಾರ್ವಜನಿಕರು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.ಇನ್ನೇನು ಮಳೆಗಾಲ ಪ್ರಾರಂಭವಾಗಲಿದ್ದು, ಪ್ರತಿಬಾರಿಯಂತೆ ಈ ಬಾರಿಯೂ ನರಕಯಾತನೆಗೆ ಸಿದ್ಧರಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಗುತ್ತಿಗೆ ಪಡೆದ ವಾಸು ರವರು ಕಾಮಗಾರಿ ಸಂಪೂರ್ಣಗೊಳಿಸದೆ ಅರ್ಧಕ್ಕೆ ನಿಲ್ಲಿಸಿರುವುದು ಜನಪ್ರತಿನಿಧಿಗಳ ಗಮನಕ್ಕೆ ಬಂದರೂ ಇವರ ಮೇಲೆ ಕೇಸ್ ದಾಖಲಿಸದೆ ಹಾಗೂ ಇವರನ್ನು ಕಪ್ಪುಪಟ್ಟಿಗೆ ಸೇರಿಸುವ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತೆ ವಹಿಸಿರುತ್ತಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಈ ರೀತಿ ನಿರ್ಲಕ್ಷ್ಯತೆ ವಹಿಸಿರುವುದು ಅತ್ಯಂತ ವಿಷಾದನೀಯ ಸಂಗತಿ.
ಕೂಡಲೇ ರಾಜಕಾಲುವೆ ಹಾಗೂ ಟೆಂಡರ್ ಕರೆದಿರುವ ಎಲ್ಲಾ ಕಾಮಗಾರಿಗಳನ್ನು ಇನ್ನು ಹದಿನೈದು ದಿನಗಳ ಒಳಗಾಗಿ ಗುತ್ತಿಗೆದಾರ ಕಾಮಗಾರಿ ಪ್ರಾರಂಭಿಸಬೇಕೆಂದು ಮಾಧ್ಯಮದ ಮುಖಾಂತರ ಒತ್ತಾಯಿಸುತ್ತೇನೆ. ತಪ್ಪಿದಲ್ಲಿ ಜನಪ್ರತಿನಿಧಿಗಳ ಅಧಿಕಾರಿಗಳ ನಿರ್ಲಕ್ಷ್ಯತೆ ಖಂಡಿಸಿ ಆ ಭಾಗದ ನಿವಾಸಿಗಳೊಂದಿಗೆ ನಗರಸಭೆ ಎದುರು ಪ್ರತಿಭಟನಾ ಧರಣಿ ಕೈಗೊಂಡು ಸರ್ಕಾರದ ಗಮನಕ್ಕೆ ತರಲಾಗುವುದು.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…