ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬೋಳೂರು ವಾರ್ಡ್ ನಿವಾಸಿಯಾದ ಶ್ರೀ ಅಮೃತ್ ಬೋಳೂರು ರವರನ್ನು ಸನ್ಮಾನಿಸಲಾಯಿತು.
ನಂತರ ಮಾತನಾಡಿದ ಶಾಸಕರು, ಜನಸಂಘದ ಕಾಲದಿಂದಲೂ ಬಿಜೆಪಿಯೊಂದಿಗೆ ಇವರ ಕುಟುಂಬ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು ವಾಜಪೇಯಿ ಯಂತಹ ದೇಶ ಕಂಡ ಮಹಾನ್ ನಾಯಕ ಇವರ ಮನೆಗೆ ಭೇಟಿ ನೀಡಿದ್ದರು. ಇಂತಹ ಹಿರಿಯರನ್ನು ಭೇಟಿ ಮಾಡುವುದು, ಗೌರವಿಸುವುದು ನಮ್ಮ ಪಾಲಿನ ಸೌಭಾಗ್ಯ ಎಂದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವರ್, ಪೂರ್ಣಿಮಾ, ಶಕೀಲಾ ಕಾವಾ, ಸತೀಶ್ ಪ್ರಭು, ಅಶ್ವಿತ್ ಕೊಟ್ಟಾರಿ, ಗೌತಮ್ ಕೋಡಿಕಲ್, ಪೂರ್ಣಿಮಾ ರಾವ್, ರವಿಶಂಕರ್ ಮಿಜಾರ್, ಭಾಸ್ಕರ ಚಂದ್ರ ಶೆಟ್ಟಿ, ನಿತಿನ್ ಕುಮಾರ್, ರಾಜಗೋಪಾಲ್ ರೈ, ನಾರಾಯಣ ಗಟ್ಟಿ, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…