ಸತತ 30 ವರ್ಷಗಳಿಂದ ವಿಘ್ನನಿವಾರಕನಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದಂದು ಸರಕಾರಿ ಶಾಲೆಯ ಸಭಾಂಗಣದಲ್ಲಿಟ್ಟು ಆರಾಧನೆ ಮಾಡಿಕೊಂಡು ಬರುತ್ತಿರುವ ಶ್ರೀ ಗಣೇಶ ಸೇವಾ ಟ್ರಸ್ಟ್(ರಿ.) ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಳ್ನಾಡು ಸಾಲೆತ್ತೂರು ಇಂದು ಜಾಗವೊಂದನ್ನ ಖರೀದಿಸಿ ಅದರ ಶಿಲಾನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಹೌದು, ಹಿರಿಯರ ಕಾಲದಲ್ಲಿ ಸರಕಾರಿ ಶಾಲೆಯಲ್ಲಿ ಗಣೇಶನನ್ನು ಕೂರಿಸಿ ಅಲ್ಲಿ ಗಣಪನಿಗೆ ಚೌತಿಯಂದು ಆರಾಧನೆ ನಡೆಯುತ್ತಿತ್ತು. ಕಾಲ ಕ್ರಮೇಣ ಅದೇ ವಾಡಿಕೆ ಮುಂದುವರಿದಿದ್ದು, ಇದೀಗ ಸ್ವಂತ ಕಟ್ಟಡವನ್ನು ಸಾಲೆತ್ತೂರು ಸರಕಾರಿ ಶಾಲಾ ಬಳಿ ಸಮಿತಿಯು ದಾನಿಗಳ ಸಹಕಾರದಿಂದ ಖರೀದಿಸಿದೆ. ಮಾ.17ರಂದು ಬೆಳಗ್ಗೆ 9.05ಕ್ಕೆ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಅದೃಷ್ಟ ಚೀಟಿ ಡ್ರಾ ನಡೆಯಲಿದೆ. ಶಿಲಾನ್ಯಾಸವನ್ನು ಹೇರಂಭ ಇಂಡಸ್ಟಿçÃಸ್ ಲಿಮಿಟೆಡ್ ಮುಂಬಯಿ ಇದರ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ನೇರವೇರಿಸಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಪ್ರಭಾಕರ ಭಟ್ ಕಲ್ಲಡ್ಕ ದೀಪಪ್ರಜ್ವಲನೆಗೈಯಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ನೀಲಿ ನಕಾಶೆ ಅನಾವರಣಗೊಳಿಸಿದ್ದು, ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ.) ಸಾಲೆತ್ತೂರು ಇದರ ಅಧ್ಯಕ್ಷರಾದ ಉದಯ್ ಕುಮಾರ್ ರೈ ಅಗರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ ಗಂಟೆ 12ಕ್ಕೆ ಕುಸಾಲ್ದ ಗುರಿಕಾರೆ ದಿನೇಶ್ ಕೋಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹಾಸ್ಯ ಕಲಾವಿದರ ಸಮಾಗಮದೊಂದಿಗೆ ಯಕ್ಷತೆಲಿಕೆ ಯಕ್ಷ ಹಾಸ್ಯ ವೈಭವ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನ 1ಗಂಟೆಗೆ ಅನ್ನದಾನ ನಡೆಯಲಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…