ಬಜೆಟ್ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು; ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದ ಸಂಭ್ರಮಾಚರಣೆ
ಪುತ್ತೂರು : ಪುತ್ತೂರಿಗೆ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರಾಗುವುದರಿಂದ ಅಲ್ಲಿ ಆರೋಗ್ಯ ಸವಲತ್ತುಗಳು ಹೆಚ್ಚಲಿವೆ. ಹಲವು ವರ್ಷಗಳ ಬೇಡಿಕೆಯಾದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬಜೆಟಿನಲ್ಲಿ ಆದ್ಯತೆ ದೊರೆತುದರಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರನ್ನು ಅಭಿಮಾನಿಗಳು, ಕಾರ್ಯಕರ್ತರು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ವೈದ್ಯಕೀಯ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ವೈದ್ಯಕೀಯ ಕಾಲೇಜು ಮತ್ತು ವಾಟರ್ ಮೆಟ್ರೋ ಯೋಜನೆಗಳನ್ನು ಹೊರತುಪಡಿಸಿದರೆ ಕರಾವಳಿಗೆ ಯಾವುದೇ ಆದ್ಯತೆ ಇಲ್ಲದ 2025-26 ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು ಇದನ್ನು ವಿಪಕ್ಷ ಬಿಜೆಪಿ ಹಲಾಲ್ ಬಜೆಟ್ ಎಂದು ಲೇವಡಿ ಮಾಡಿದೆ. ಎಸ್.ಸಿ., ಎಸ್.ಟಿ. ಮತ್ತು ಒ.ಬಿ.ಸಿ ವರ್ಗದವರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗಿದೆ ಮತ್ತು ಅಲ್ಪಸಂಖ್ಯಾತರಿಗೆ ಮಣೆ ಹಾಕಲಾಗಿದೆ. ಇದು ಅತಿಯಾದ ಓಲೈಕೆ ಎಂದು ಬಿಜೆಪಿ ಕೆಂಡ ಕಾರಿದೆ. ಇದು ಸಿದ್ದರಾಮಯ್ಯ ಅವರ ಕೊನೆಯ ಬಜೆಟ್ ಎಂದು ಅದು ಹೇಳಿದೆ. ಸುಮಾರು ಮೂರುವರೆ ಗಂಟೆ ಕಾಲ ಬಜೆಟ್ ಭಾಷಣ ಮಾಡಿದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದು ಹದಿನಾರನೇ ಬಜೆಟ್. ಜೈ ಹಿಂದ್ , ಜೈ ಕರ್ನಾಟಕ ಎನ್ನುವ ಮೂಲಕ ಅವರು ಬಜೆಟ್ ಭಾಷಣ ಮುಕ್ತಾಯಗೊಳಿಸಿದ್ದಾರೆ. . ಬಜೆಟಿನಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಮೊತ್ತ ನೀಡಲಾಗಿದೆ. ಮೆಟ್ರೋ ವಿಸ್ತರಣೆ, ಸುರಂಗ ಮಾರ್ಗ ನಿರ್ಮಾಣ ಮೂಲಕ ಸಂಚಾರ ದಟ್ಟಣೆಯನ್ನು ನಿವಾರಿಸುವ ಕ್ರಮಗಳಿಗೆ ಬಜೆಟ್ ಆದ್ಯತೆ ನೀಡಿದೆ. ಪಂಚಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಇದ್ದ ಅನಿಶ್ಚಿತತೆ ನಿವಾರಣೆಯಾಗಿದೆ. ಅದಕ್ಕೆ ಅನುದಾನವನ್ನು ಬಜೆಟಿನಲ್ಲಿ ತೆಗೆದಿಡುವ ಮೂಲಕ ಮುಖ್ಯಮಂತ್ರಿಗಳು ಗ್ಯಾರಂಟಿಗಳು ಅಬಾಧಿತ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ಬಾರಿಯ ಬಜೆಟಿನ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿ ದಾಟಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…