ಬಾಲಕಿಯರ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ!: ಆರೋಪಿ ಬಂಧನ
ಸಂಗಾರೆಡ್ಡಿ : ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕಿಸ್ತರೆಡ್ಡಿಪೇಟೆಯಲ್ಲಿ ನಡೆದ ಆಘಾತಕಾರಿ ಘಟನೆ ನಡೆದಿದ್ದು, ಖಾಸಗಿ ಮಹಿಳಾ ಹಾಸ್ಟೆಲ್ನಲ್ಲಿರುವ ರಹಸ್ಯ ಕ್ಯಾಮೆರಾ ಪತ್ತೆಯಾದ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್ ಮಹೇಶ್ವರ್ ರಾವ್ ಅನ್ನು ಪೊಲೀಸರು ಬಂಧಿಸಿದ್ದಾರೆ.
ಕ್ಯಾಮೆರಾ ಪತ್ತೆ
ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಕಾಣಿಸಿದ ಫೋನ್ ಚಾರ್ಜರ್ ಅನ್ನು ಗಮನಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಮೆರಾ ಚೆಕ್ ಮಾಡಿದಾಗ, ಅದು ರಹಸ್ಯವಾಗಿ ಅಳವಡಿಸಲಾದ ಸ್ಟೈ ಕ್ಯಾಮೆರಾ ಎಂಬುದು ಬಹಿರಂಗವಾಗಿದೆ. ಈ ವಿಷಯವನ್ನು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಆರೋಪಿಯ ಹಿಂದಿನ ಚರಿತ್ರೆ
ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಮಹೇಶ್ವರ್ ರಾವ್ ಪೂರ್ವದಲ್ಲಿಯೇ ತನ್ನ ಮನೆಯಲ್ಲಿ ಅಂತಹ ಕ್ಯಾಮೆರಾಗಳನ್ನು ಅಳವಡಿಸಿದ್ದನ್ನು ಪತ್ತೆ ಹಚ್ಚಿದ್ದಾರೆ. ತಾಯಿಯೊಂದಿಗೆ ಮತ್ತು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಈತ, ಅವರನ್ನು ಗಮನೆದಲ್ಲಿಟ್ಟುಕೊಳ್ಳಲು ಮೊದಲು ಮನೆಗೆ ರಹಸ್ಯ ಕ್ಯಾಮೆರಾ ಅಳವಡಿಸಿದ್ದ. ಬಳಿಕ, ತನ್ನ ಕರ್ತವ್ಯವನ್ನೇ ದುರುಪಯೋಗಪಡಿಸಿಕೊಂಡು ಹಾಸ್ಟೆಲ್‌ನ ಅಡುಗೆಮನೆ ಹಾಗೂ ವಿದ್ಯಾರ್ಥಿನಿಯರ ಕೊಠಡಿಗಳಲ್ಲಿಯೂ ಕ್ಯಾಮೆರಾ ಅಳವಡಿಸಿದ್ದ ಎಂದು ತಿಳಿದು ಬಂದಿದೆ. .
ಪೊಲೀಸರ ತನಿಖೆ ಮತ್ತು ಮುಂದಿನ ಕ್ರಮ
ಅಮೀನ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಾಸ್ಟೆಲ್‌ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮಹೇಶ್ವರ್ ರಾವ್ ಬಳಿಯಿಂದ ಹಲವು ಸ್ಟೈ ಕ್ಯಾಮೆರಾ ಚಿಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಡೇಟಾದಲ್ಲಿ ಎಷ್ಟು ಸಮಯದ ವಿಡಿಯೋಗಳು ದಾಖಲಾಗಿವೆ. ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಲಾಗಿದೆ ಅಥವಾ ಯಾರಾದರೂ ಮಾರಾಟ ಮಾಡಲಾಗಿದೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿಯುತ್ತಿದೆ. ಪೊಲೀಸರು ವಶಪಡಿಸಿಕೊಂಡಿರುವ ಕ್ಯಾಮೆರಾ ಮತ್ತು ಚಾರ್ಜರ್ ಅನ್ನು ವಿಧಿವಿಜ್ಞಾನ ಪ್ರಯೋಗಶಾಲೆಗೆ ಕಳುಹಿಸಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಬಹಿರಂಗವಾಗಲಿದೆ. ತನಿಖಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…