ಕಡಬ :ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವೀಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (೨೪) ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ಸ್ಕೂಟಿ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಅಪಘಾತ ಸಂಭವಿಸಿ, ಗಂಭೀರ ಗಾಯಗೊಂಡಿದ್ದ ವಿನ್ಯಾಸ್ ನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಆತ ಮೃತಪಟ್ಟಿದ್ದಾರೆ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿನ್ಯಾಸ್ ಅವರು ಕೂಲಿ ಕೆಲಸ ನಿರ್ವಹಿಸುತ್ತಿದ್ದು, ಇವರ ತಂದೆ ಇತ್ತೀಚೆಗಷ್ಟೆ ನಿಧನ ಹೊಂದಿದ್ದರು. ಮನೆಗೆ ಆಧಾರಸ್ತಂಭವಾಗಿದ್ದ ಯುವಕನ ಸಾವಿನಿಂದಾಗಿ ತಾಯಿ ಹಾಗೂ ಸಹೋದರಿ ಮಾತ್ರ ಇರುವ ಕುಟುಂಬ ಕಂಗಾಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…