ಸೌಜನ್ಯ ಕೊಲೆ ಕುರಿತು ವಿಡಿಯೋ: ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ!
ಬೆಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ತನಿಖಾ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.
ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿ 17 ವರ್ಷದ ಸೌಜನ್ಯಳನ್ನು 2012ರ ಅಕ್ಟೋಬರ್ 9 ರಂದು ಅತ್ಯಾಚಾರ ಮತ್ತು ಕೊಲೆ ಮಾಡಲಾಗಿತ್ತು.
ಬಿಎನ್ಎಸ್ 2023ರ ಸೆಕ್ಷನ್ 299 (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು) ಅಡಿಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವ ಮೂಲಕ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅರ್ಜಿದಾರರಿಗೆ ಮಧ್ಯಂತರ ರಿಲೀಫ್ ನೀಡಿದ್ದಾರೆ.
ಸಮೀರ್ ತಮ್ಮ ಯೂಟ್ಯೂಬ್ ಚಾನೆಲ್ ಧೂತ: ಸಮೀರ್ ಎಂಡಿ’ ನಲ್ಲಿ “ಧರ್ಮಸ್ಥಳ ಸೌಜನ್ಯ ಪ್ರಕರಣ” ಎಂಬ ಶೀರ್ಷಿಕೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಇದು 18 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.
ಧರ್ಮಸ್ಥಳ ಪ್ರದೇಶದಲ್ಲಿ ದಶಕಗಳ ಕಾಲ ನಡೆದ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಈ ವೀಡಿಯೊ ಹೇಳಲಾಗಿದೆ. ವಿಶೇಷವಾಗಿ 2012ರ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೊದಲಿಗೆ ಸಂತೋಷ್ ರಾವ್ ನನ್ನು ಆರೋಪಿ ಎಂದು ಬಿಂಬಿಸಲಾಗಿತ್ತು. ನಂತರ ಕೋರ್ಟ್ ಆರೋಪದಿಂದ ಖುಲಾಸೆಗೊಳಿಸಿದ್ದು ಹಲವು ಕ್ರಿಮಿನಲ್ ತನಿಖೆಗಳಲ್ಲಿ ಪ್ರಭಾವ ಬೀರಿದ ಮಾದರಿಗಳನ್ನು ವಿಡಿಯೋದಲ್ಲಿ ಹೇಳಲಾಗಿತ್ತು.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ 2025ರ ಮಾರ್ಚ್ 5ರಂದು, ಕೌಲ್ ಬಜಾರ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಸಮೀರ್ ಪರ ವಾದ ಮಂಡಿಸಿದ ವಕೀಲ ಎ ವೇಲನ್, ಎಫ್‌ಐಆರ್ ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ ಮತ್ತು ಅರ್ಜಿದಾರರ ಅಭಿವ್ಯಕ್ತಿಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…