ಕಡಲು ಸೇರಿದ 115 ಕಡಲಾಮೆ ಮರಿಗಳು
ತಾರಾಪತಿ : ಕಳೆದ 40 ದಿನಗಳ ಹಿಂದೆ ಮರವಂತೆ ಸಮುದ್ರ ತೀರ ಹಾಗೂ ಬೈಂದೂರಿನ ತಾರಾಪತಿ ಕಡಲ ಕಿನಾರೆಯಲ್ಲಿ ಕಡಲಾಮೆಗಳ ಮೊಟ್ಟೆಗಳನ್ನು ಸಂರಕ್ಷಣೆ ಮಾಡಿದ್ದು ಅದರಲ್ಲಿ ಮರವಂತೆ ‘ಹ್ಯಾಚರಿ’ಯಲ್ಲಿ ಗುರುವಾರ ರಾತ್ರಿ ಮೊಟ್ಟೆಗಳು ಒಡೆದು ಸುಮಾರು 115 ಮರಿಗಳು ಹೊರಬಂದು ಕಡಲು ಸೇರಿವೆ.
ಜನವರಿ ತಿಂಗಳ ಅಂತ್ಯದಲ್ಲಿ ಮರವಂತೆ ಹಾಗೂ ತಾರಾಪತಿ ಕಡಲ ತೀರದಲ್ಲಿ ಕಡಲಾಮೆಗಳು ಮೊಟ್ಟೆಗಳನ್ನಿಟ್ಟಿದ್ದವು. ಅದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಸಹಿತ ಈ ಬಗ್ಗೆ ಮುತುವರ್ಜಿ ವಹಿಸಲು ಆಸಕ್ತ ಸಂಘ- ಸಂಸ್ಥೆಗಳಿಗೆ ಮಾಹಿತಿ ನೀಡಿದ್ದರು. ಅದರಂತೆ ಮರವಂತೆ ಹಾಗೂ ತಾರಾಪತಿಯಲ್ಲಿ ಪ್ರತ್ಯೇಕ 2 ಹ್ಯಾಚರಿ ನಿರ್ಮಿಸಲಾಗಿತ್ತು. ಗುರುವಾರ ರಾತ್ರಿ ಮರವಂತೆ ಹ್ಯಾಚರಿಗಳಿಂದ ಒಟ್ಟು 115 ಕಡಲಾಮೆ ಮರಿಗಳು ಹೊರಕ್ಕೆ ಬಂದಿದ್ದು ಹೊರಕ್ಕೆ ಬಂದ ಕಡಲಾಮೆ ಮರಿಗಳು ನೈಸರ್ಗಿಕವಾಗಿ ಕಡಲು ಸೇರಲು ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಮೀನುಗಾರರು ಒಗ್ಗೂಡಿ ಅನುವು ಮಾಡಿಕೊಟ್ಟರು. ತಾರಾಪತಿಯ ಹ್ಯಾಚರಿಯಿಂದ ಮುಂದಿನ ವಾರದಲ್ಲಿ ಮರಿಗಳು ಬರುವ ನಿರೀಕ್ಷೆಯಿದೆ. ಸಮುದ್ರದಿಂದ ಹೊರಬಂದು ದಡದಲ್ಲಿ ಕಡಲಾಮೆಗಳು ಮೊಟ್ಟೆಯಿಟ್ಟ 48-60 ದಿನದಲ್ಲಿ ಮರಿಗಳು ಹೊರಬರುತ್ತವೆ. ಮೊಟ್ಟೆಗಳ ಸಂರಕ್ಷಣೆ, ವೀಕ್ಷಣೆ ಹಾಗೂ ಅಂತಿಮ ಫಲಿತಾಂಶದ ನಿಟ್ಟಿನಲ್ಲಿ 40ಕ್ಕೂ ಅಧಿಕ ದಿನಗಳಿಂದ ಮುತುವರ್ಜಿ ವಹಿಸಿದ್ದು ಮಾತ್ರವಲ್ಲದೇ ಮರಿಯೊಡೆಯುವ ರಾತ್ರಿ ತನಕವೂ ನಿಗಾವಹಿಸಿದ್ದ ಅರಣ್ಯ ಇಲಾಖೆ, ಸ್ಥಳೀಯರ ಕಾರ್ಯ ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರವಾಗಿದೆ. ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳನ್ನು ಅಲ್ಲಲ್ಲೇ ನೈಸರ್ಗಿಕವಾಗಿ ಹ್ಯಾಚರಿ ನಿರ್ಮಿಸುವ ಮೂಲಕ ಸಂರಕ್ಷಿಸಲಾಗಿತ್ತು. ಕಡಲಿನ ಸ್ವಚ್ಛತೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಅಳಿವಿನ ಅಂಚಲ್ಲಿರುವ ಕಡಲಾಮೆ ರಕ್ಷಣೆ ಆಗುತ್ತಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…