ಜೈಲಿನಲ್ಲಿ ಆರೋಪಿ ನೇಣು ಬಿಗಿದು ಆತ್ಮಹತ್ಯೆ
ಮೂಡಬಿದ್ರಿ : ಕಳೆದ ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿ ಜೈಲಿನಲ್ಲಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮೂಡುಬಿದಿರೆ ಲಾಡಿಯ ಪ್ರಕಾಶ್ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಆರೋಪಿಯಾಗಿದ್ದಾನೆ. ಪಕ್ಕದ ಮನೆಯ ಹದಿಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಲಾಡಿ ಅಜಂಕಲ್ಲು ನಿವಾಸಿ ಪ್ರಕಾಶ್ ಎಂಬವರನ್ನು ಮೂಡುಬಿದಿರೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಜೈಲಿನ ಬಿ ಬ್ಯಾರಕಿನ ಶೌಚಾಲಯದ ಕಿಟಕಿಯ ಸರಳುಗಳಿಗೆ ಆರೋಪಿ ಮುಂಜಾನೆ ಶಾಲಿನಿಂದ ನೇಣುಬಿಗಿದುಕೊಂಡಿದ್ದನ್ನು ಜೈಲಿನ ಭದ್ರತಾ ಸಿಬ್ಬಂದಿ ಗಮನಿಸಿದರು. ಆತನನ್ನು ತಕ್ಷಣವೇ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಜೈಲಿನ ವಾಹನದಲ್ಲಿ ಕರೆದೊಯ್ದಿದ್ದಾರೆ. ಆತ ಅಸುನೀಗಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆರೋಪಿ ಪ್ರಕಾಶ್ ವಿಪರೀತ ಕುಡಿತದ ಚಟ ಹೊಂದಿದ್ದ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಆತನಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿರಲಿಲ್ಲ. ಜೈಲಿನಿಂದ ತನ್ನನ್ನು ಬಿಡಿಸುವುದಕ್ಕೆ ಕುಟುಂಬಸ್ಥರು ಯಾರೂ ಬರುವುದಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಎಂದು ಜೈಲಿನ ಮೂಲಗಳು ತಿಳಿಸಿವೆ. ಆತ್ಮಹತ್ಯೆ ಕುರಿತು ಬರ್ಕೆ ಪೋಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…